ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಬಂಡಿ

0
30

ಕನ್ನಡಮ್ಮ ಸುದ್ದಿ-ಗಜೇಂದ್ರಗಡ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಾಕಿಕೊಂಡಿರುವ ಯೋಜನೆಗಳನ್ನು ಸಾಕಾರಗೊಳಿಸಲು ಈಗಾಗಲೇ ಶ್ರಮಿಸುತ್ತಿದ್ದೇನೆ. ಹೀಗಾಗಿ ಕ್ಷೇತ್ರದ ಜನತೆ ಅಭಿಮಾನ ಹಾಗೂ ಪ್ರೀತಿಯಿಂದ ಮಾಡುತ್ತಿರುವ ಸನ್ಮಾನಗಳು ನನ್ನ ಮೇಲಿನ ಜವಾಬ್ದಾರಿಗಳನ್ನು ಮತ್ತಷ್ಟು ಜಾಗೃತಗೊಳಿಸುತ್ತಿವೆ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಪಟ್ಟಣದ ಎಪಿಎಂಸಿ ಗಣೇಶ ದೇವಸ್ಥಾನದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ವರ್ತಕರ ಸಂಘ ಹಾಗೂ ಕೃಷಿ ಉತ್ಪನ್ನ ಉಪ ಮಾರುಕಟ್ಟೆ ಗಜೇಂದ್ರಗಡ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮ ಹಾಗೂ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯುವುದು ರಾಜಕೀಯವಾಗಿದೆ. ಆದರೆ ಫಲಿತಾಂಶದ ಬಳಿಕ ರಾಜಕೀಯ ಬದಿಗೊತ್ತಿ ಪ್ರತಿಯೊಂದು ಸಮಾಜದ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ರೈತರ, ಮಹಿಳೆಯರ, ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯವಾಗಿದೆ. ಹೀಗಾಗಿ ಸಮಸ್ಯೆ ಹೊತ್ತು ಬರುವ ಸಾರ್ವಜನಿಕರಿಗೆ ಸ್ಪಂದಿಸಿ ಸಮಸ್ಯೆಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಜನತೆ ನೀಡುವ ಪ್ರತಿಯೊಂದು ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುವುದರ ಜೊತೆಗೆ ಜ್ವಲಂತ ಸಮಸ್ಯೆಗಳನ್ನು ಹೊತ್ತು ಬರುವ ಜನರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಕಲಾದಲ್ಲಿಯೇ ಪರಿಹಾರ ಕಂಡುಕೊಳ್ಳುವ ಆಡಳಿತಕ್ಕೆ ಮೊದಲ ಆಧ್ಯತೆ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಎಸ್‌.ಬಿ.ಹಿರೇಮಠ, ಪವಾಡೆಪ್ಪ ಮ್ಯಾಗೇರಿ, ಅಮರೇಶ ಬಳಿಗೇರ, ಸೂಗೀರಪ್ಪ ಕಾಜಗಾರ, ಸಿ.ಎಸ್‌.ವಾಲಿ, ಈಶಪ್ಪ ಮ್ಯಾಗೇರಿ, ಬಸವರಾಜ ಪುರ್ತಗೇರಿ, ಶರಣಪ್ಪ ಹಿರೇಕೊಪ್ಪ, ವೀರೇಶ ಗೌರಿಮಠ, ಶರಣಪ್ಪ ಬಳಿಗೇರ, ಮಹಾಂತೇಶ ಮಳಗಿ, ಮುತ್ತು ಕಡಗದ, ಅಶೋಕ ವನ್ನಾಲ, ವಿನಾಯಕ ಪವಾರ ಸೇರಿದಂತೆ ಇತರರು ಇದ್ದರು.

loading...