ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ: ಶಾಸಕಿ ಹೆಬ್ಬಾಳಕರ್

0
24

ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ: ಶಾಸಕಿ ಹೆಬ್ಬಾಳಕರ್

ಬೆಳಗಾವಿ:
ಗ್ರಾಮೀಣ ಕ್ಷೇತ್ರದ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮಕ್ಕಳು ಸುರಕ್ಷತೆಯೊಂದಿಗೆ ಶಿಕ್ಷಣ ಕಲಿಯುವಂತೆ ಗಮನಹರಿಸಲಾಗುತ್ತಿದೆ ಎಂದು ಶಾಸಕಿ ಲಕ್ಷಿ÷್ಮ ಹೆಬ್ಬಾಳಕರ್ ಹೇಳಿದರು.
ದೇಸೂರ್ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆಯನ್ನು ನೀಡಿ ಅವರು ಮಾತನಾಡುತ್ತಿದ್ದರು.ಪ್ರವಾಹದಂತಹ ಪ್ರಕೃತಿ ವಿಕೋಪ ನಮ್ಮ ಮೇಲೆ ಪ್ರಹಾರ ಮಾಡುತ್ತಿರುವ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಇತೀ ಮುಖ್ಯವಾಗಿದೆ. ಶಿಕ್ಷಣ ಎಷ್ಟು ಮುಖ್ಯವೋ ಸುರಕ್ಷತೆ ಅದಕ್ಕಿಂತ ಹೆಚ್ಚು ಮುಖ್ಯವಾಗಿದೆ. ಹಾಗಾಗಿ ಸುಸಜ್ಜಿತ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೆಬ್ಬಾಳಕರ್ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಸ್ಥಳೀಯ ಜನ ಪ್ರತಿನಿಧಿಗಳು, ಶಾಲಾ ಸಿಬ್ಬಂದಿ, ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ, ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

loading...