ಗುರುವಾರ ತಡರಾತ್ರಿ ತಲಕಾವೇರಿ ತೀರ್ಥೋದ್ಭವ

0
5

ಮಡಿಕೇರಿ-ಕಾವೇರಿ ನದಿಯ ಉಗಮ ಸ್ಥಳ ಕೊಡಗಿನ ತಲಾ ಕಾವೇರಿಯಲ್ಲಿ ಗುರುವಾರ ತಡರಾತ್ರಿ 12 ಗಂಟೆ 59 ನಿಮಿಷಕ್ಕೆ ಪವಿತ್ರ ತುಲಾ ಸಂಕ್ರಮಣ ತೀರ್ಥೋದ್ಭವ ಘಟಿಸಲಿದೆ.

ಈಗಾಗಲೇ ರಾಜ್ಯ ಮತ್ತು ಹೊರರಾಜ್ಯಗಳ ಸಾವಿರಾರು ಭಕ್ತರು ತಲಾ ಕಾವೇರಿಯತ್ತ ಧಾವಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೊಡುಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಕಾವೇರಿ ತೀರ್ಥವನ್ನು ತುಂಬಿಕೊಳ್ಳಲು ಈ ಬಾರಿ ಪ್ಲಾಸ್ಟಿಕ್ ಬಾಟಲಿ ಮತ್ತು ಪ್ಲಾಸ್ಟಿಕ್ ಬಿಂದಿಗೆಗಳ ಬಳಕೆ ನಿಷೇಧಿಸಲಾಗಿದೆ.

ತಾಮ್ರ ಅಥವಾ ಸ್ಟೀಲ್ ಬಿಂದಿಗೆಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿದ್ದು ಭಾಗಮಂಡಲದಿಂದ ತಲಕಾವೇರಿಗೆ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಬುಧವಾರ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಅಕ್ಷಯ ಪಾತ್ರೆಗೆ ಅಕ್ಕಿ ಹಾಕುವ ಮೂಲಕ ಧಾರ್ಮಿಕ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಗಿದೆ.

ಕರ್ಕಾಟಕ ಲಗ್ನದಲ್ಲಿ ಸೂರ್ಯನು ತುಲಾ ರಾಶಿಗೆ ಪ್ರವೇಶಿಸುವ ಸಮಯದಲ್ಲಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ಭಕ್ತರಿಗೆ ಕಾಣಿಸಿಕೊಳ್ಳಲಿದ್ದಾಳೆ.

loading...