ಗೋ ಬ್ಯಾಕ್.. ಗೋ ಬ್ಯಾಕ್ ಅಮಿತ್ ಶಾ ಗೋ ಬ್ಯಾಕ್…

0
62

 

ಬೆಳಗಾವಿ

ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ಭಾನುವಾರ ಬೆಳಗಾವಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೋ ಬ್ಯಾಕ್ ಎಂದು‌ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಅಮೀತ್ ಶಾ ಬೆಳಗಾವಿ ಜಿಲ್ಲೆಗೆ ಆಗಮಿಸುವ ಹಿನ್ನೆಲೆ. ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ನಡೆಸಿ ಅಮಿತ್ ಶಾ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರೈತ ವಿರೋಧಿ ಕೃಷಿ ಮಸೂದೆಯನ್ನು ಜಾರಿಗೊಳಿಸಿರುವ ಕೇಂದ್ರ ಸರಕಾರದ ನಡೆಯನ್ನು ಲಾಭ ಹಾನಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಅವಕಾಶ ನೀಡದ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು.
ಕಳೆದ 60 ದಿನಗಳಿಂದ ದೆಹಲಿಯಲ್ಲಿ ಕೃಷಿ ವಿರೋಧ ನೀತಿಯನ್ನು ಜಾರಿಗೆ ಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರಕಾರ ಮಾತ್ರ ತನ್ನ ಮೊಂಡುತನವನ್ನು ಪ್ರದರ್ಶನ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ರಾಘವೇಂದ್ರ ನಾಯಕ, ಪ್ರಕಾಶ ನಾಯ್ಕ, ಜಯಶ್ರೀ ಗುರನ್ನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...