ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ : ಸನಾತನ ಸಂಸ್ಥೆ

0
2

ಪಣಜಿ: ಪ಻ತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ
ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ರಿಷಿಕೇಶ್ ದೇವದಿಕರ್ ಅವರನ್ನು ಬಂಧಿಸಿದ್ದಾರೆ ಎಂದು ನಮಗೆ ತಿಳಿದಿದೆ ಅವರನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಯಿತು. ನಾವು ಈ ವಿಷಯದ ಬಗ್ಗೆ ಹೆಚ್ಚಿನ ವಿಚಾರಣೆಗೆ ಮುಂದಾಗಿದ್ದೇವೆ” ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಚೇತನ್ ರಾಜನ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ
“ಮಾಹಿತಿಯ ಪ್ರಕಾರ, ದೇವದಿಕರ್ ಕೆಲವು ವರ್ಷಗಳ ಹಿಂದೆ ನಮ್ಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು; ಆದರೆ ಅವರು ಕಳೆದ ಎಂಟು-ಹತ್ತು ವರ್ಷಗಳಿಂದ ಸಕ್ರಿಯವಾಗಿಲ್ಲ. ಈ ಮಧ್ಯೆ ಬೇರೆ ಯಾವುದೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ನಮಗೆ ತಿಳಿದಿತ್ತು. ಸನಾತನ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯಾರಾದರೂ ಈಗ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದಾಗ ಸನಾತನ ಸಂಸ್ಥೆಯನ್ನು ದೂಷಿಸುವುದು ಸಂಪೂರ್ಣವಾಗಿ ಸೂಕ್ತವಲ್ಲ. ಸನಾತನ ಸಂಸ್ಥೆಯು ಆಧ್ಯಾತ್ಮಿಕತೆಯನ್ನು ಹರಡುವ ಕೆಲಸವನ್ನು ಮಾಡುತ್ತದೆ. ಸನಾತನ್ ಸಂಸ್ಥೆಯು ಈ ಪತ್ರಿಕಾ ಪ್ರಕಟಣೆಯ ಮೂಲಕ ಯಾವುದೇ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುತ್ತದೆ, ” ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೇ  9 ರಂದು ಜಾರ್ಖಂಡ್‌ನ ಧನ್ಬಾದ್ ಜಿಲ್ಲೆಯ ಕತ್ರಾಸ್‌ನಲ್ಲಿರುವ ಅಡಗುತಾಣದಿಂದ ರುಶಿಕೇಶ್ ದೇವದಿಕರ್ ಅಲಿಯಾಸ್ ಮುರಳಿ (44) ಅವರನ್ನು ಬಂಧಿಸಿತ್ತು.
ಪತ್ರಕರ್ತೆ ಮತ್ತು ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು 2017 ಸೆಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿರುವ ಅವರ ನಿವಾಸದ ಹೊರಗೆ ಗುಂಡು ಹಾರಿಸ ಹತ್ಯೆ ಮಾಡಲಾಯಿತು.   ಅವರ ಕೊಲೆ ಪ್ಯಾನ್-ಇಂಡಿಯಾ ಪ್ರತಿಭಟನೆಗೆ ನಾಂದಿ ಹಾಡಿದೆ.

loading...