ಗ್ರಾಪಂ ಚುನಾವಣೆಗೆ ಡಿ.7 ಮತ್ತು 11 ರಂದು ಅಧಿಸೂಚನೆ: ಡಿಸಿ ಹಿರೇಮಠ

0
129

ಬೆಳಗಾವಿ
ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಭಾನುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ ಎಂದರು.
ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; ಎರಡನೇ ಹಂತಕ್ಕೆ ಡಿ.17 ಆಗಿರುತ್ತದೆ. ಉಮೇದುವಾರಿಕೆ ಹಿಂಪಡೆಯಲು ಮೊದಲ ಹಂತ-ಡಿ.14 ಹಾಗೂ ಎರಡನೇ ಹಂತ-ಡಿ.19 ಕಡೆಯ ದಿನವಾಗಿರುತ್ತದೆ. ಮೊದಲ ಹಂತದ ಚುನಾವಣೆಗೆ ಡಿ.22 ಹಾಗೂ ಎರಡನೇ ಹಂತಕ್ಕೆ ಡಿ.27 ಮತದಾನ ನಡೆಯಲಿದ್ದು, ಡಿಸೆಂಬರ್ 31 ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.
ಆಯಾ ತಾಲ್ಲೂಕುಗಳಲ್ಲಿ ಡಿ.30 ರಂದು ಬೆಳಿಗ್ಗೆ 8 ಗಂಟೆಯಿAದ ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ಸಂಬAಧಿಸಿದAತೆ ಏನಾದರೂ ಅಕ್ರಮಗಳು ಕಂಡುಬAದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗುವ ಕಂಟ್ರೋಲ್ ರೂಮ್, ಪೊಲೀಸ್ ಅಥವಾ ಅಬಕಾರಿ ಇಲಾಖೆಯ ಕಂಟ್ರೋಲ್ ರೂಮ್ ಗೆ ಸಾರ್ವಜನಿಕರು ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.
—————————-
477 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ
ಡಿಸೆಂಬರ್ 2020 ರ ಅಂತ್ಯದವರೆಗೆ ಅವಧಿ ಮುಕ್ತಾಯವಾಗಲಿರುವ ಒಟ್ಟು ಜಿಲ್ಲೆಯ ಒಟ್ಟು 499 ಗ್ರಾಮ ಪಂಚಾಯಿತಿಗಳ ಪೈಕಿ 477 ಪಂಚಾಯಿತಿಗಳ 2738 ಕ್ಷೇತ್ರಗಳಿಗೆ ಹಾಗೂ ವಿವಿಧ ವರ್ಗವಾರು 8195 ಸದಸ್ಯ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು.
ಸಂಬAಧಪಟ್ಟ ಗ್ರಾಮ ಪಂಚಾಯತಿಗಳಲ್ಲಿ ನಾಮಪತ್ರಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿರುತ್ತದೆ.
——————————
ಜಿಲ್ಲೆಯಲ್ಲಿ 25.24 ಲಕ್ಷ ಮತದಾರರು:
ಪ್ರಸಕ್ತ ಗ್ರಾಪಂ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 12,84,695 ಪುರುಷರು ಮತ್ತು 12,39,486 ಮಹಿಳೆಯರು ಸೇರಿದಂತೆ ಒಟ್ಟು 25,24,181 ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚುನಾವಣಾ ಪ್ರಕ್ರಿಯೆಗೆ ಒಟ್ಟು 534 ಚುನಾವಣಾಧಿಕಾರಿಗಳು ಹಾಗೂ 576 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ.
——————————
ಡಿಸೆಂಬರ್ 31 ರವರೆಗೆ ನೀತಿಸಂಹಿತೆ

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನವೆಂಬರ್ 31 ರಿಂದ ಡಿಸೆಂಬರ್ 31 ರವರೆಗೆ ನೀತಿಸಂಹಿತೆ ಜಾರಿಯಲ್ಲಿರುವುದು.
ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆಯ ಪ್ರದೇಶಗಳಿಗೆ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

———————————–
ಚುನಾವಣಾ ಅಕ್ರಮ ತಡೆಗೆ-ಬಿಗಿ ಬಂದೋಬಸ್ತ್:

ಹಣ-ಹೆAಡ ಹಂಚಿಕೆಯ ಮೂಲಕ ಮತದಾರರ ಮೇಲೆ ಪ್ರಭಾವ ಬೀರಬಹುದಾದ ಮತಗಟ್ಟೆಗಳನ್ನು ಗುರುತಿಸಿ ಅವುಗಳ ಆಧಾರದ ಮೇಲೆ ಭದ್ರತಾ ಮತ್ತಿತರ ವಿಚಕ್ಷಣಾ ತಂಡಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಅಬಕಾರಿ ಮತ್ತು ಪೊಲೀಸ್ ಇಲಾಖೆಯ ವತಿಯಿಂದ ತಾಲ್ಲೂಕುವಾರು ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗುವುದು. ಉಳಿದಂತೆ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದರು.
ಅAತರ್ ರಾಜ್ಯ, ಅಂತರ್ ಜಿಲ್ಲೆ ಹಾಗೂ ಅಂತರ್ ತಾಲ್ಲೂಕು ಮಾದರಿಯಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗುವುದು. ಗಡಿ ತಾಲ್ಲೂಕುಗಳಿಗೆ ಸಂಬAಧಿಸಿದAತೆ ನೆರೆಯ ರಾಜ್ಯದ ಸಂಬAಧಿಸಿದ ಇಲಾಖೆಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುವುದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ವಿವರಿಸಿದರು.
ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಜಿಪಂ ಸಿಇಒ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.

loading...