ಚಿಕ್ಕೋಡಿಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ

0
282


ಕನ್ನಡಮ್ಮ ಸುದ್ದಿ
ಚಿಕ್ಕೋಡಿ 22: ಪಟ್ಟಣದ ಹೊರವಲಯದಲ್ಲಿರುವ ಮನೆಯೊಂದಕ್ಕೆ ಯಾರೂ ಇಲ್ಲದ ಸಮಯ ನೋಡಿ ಶನಿವಾರ ಹಾಡಹಡಲೇ ಮನೆಗೆ ನುಗ್ಗಿರುವ ದರೋಡೆಕೋರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗ-ನಾಣ್ಯ ದೋಚಿ ಫರಾರಿಯಾಗಿದ್ದಾರೆ.
ಪಟ್ಟಣದ ಹೊರವಲಯದಲ್ಲಿರುವ ಯಕ್ಸಂಬಾ ರಸ್ತೆಯ ಮಾರುತಿ ನಾರ್ವೇಕರ ಎಂಬುವರ ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು 300 ಗ್ರಾಂ ಚಿನ್ನಾಭರಣ, 1.20 ಲಕ್ಷ ನಗದು, ಸೇರಿದಂತೆ ಮಹತ್ವದ ದಾಖಲೆಗಳನ್ನು ದೋಚಿ ಫರಾರಿಯಾಗಿದ್ದಾರೆ. ವಿಷಯ ತಿಳಿದ ಚಿಕ್ಕೋಡಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಾಥಮಿಕ ತನಿಖೆ ನಡೆಸಿದರು. ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ರವೀಂದ್ರ ಗಡಾದ, ಚಿಕ್ಕೋಡಿ ಎಎಸ್‍ಪಿ ಮಿಥುನಕುಮಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

loading...