ಚಿದಂಬರಂ ಭೂಮಿಗೆ ಭಾರವಾಗಿ ಬದುಕುತ್ತಿದ್ದಾರೆ: ಪಳನಿಸ್ವಾಮಿ ಕಿಡಿ

0
2

ಚೆನ್ನೈ:- ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರು ಭೂಮಿಗೆ ಭಾರವಾಗಿ ಬದುಕುತ್ತಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ
ಜಮ್ಮು ಮತ್ತು ಕಾಶ್ಮೀರದ ಮಾದರಿಯಂತೆ ತಮಿಳುನಾಡನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಮೋದಿ ಸರಕಾರ ಹೊರಟಿದೆ ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಕೇಂದ್ರ ಸರಕಾರ ಇಂತಹ ಕ್ರಮಕ್ಕೆ ಮುಂದಾಗಿದ್ದರೂ ಆಡಳಿತಾರೂಢ ಎಐಎಡಿಎಂಕೆ ಸರಕಾರ ಯಾವುದೇ ಪ್ರತಿರೋಧ ತೋರದೇ ಸುಮ್ಮನೆ ಕಣ್ಣುಮುಚ್ಚಿ ಕುಳಿತಿದೆ ಎಂದು ಚಿದು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.
ಚಿದಂಬರಂ ಅವರು ಕೇಂದ್ರ ಸಚಿವರಾಗಿ ದೀರ್ಘಕಾಲ ಅಡಳಿತ ಮಾಡಿದ್ದರೂ ಕಾವೇರಿ ವಿವಾದ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಸಮಸ್ಯೆ ಬಗೆಹರಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅವರು ರಾಜ್ಯಕ್ಕೆ ಯಾವ ಯೋಜನೆಗಳನ್ನು ತಂದಿದ್ದಾರೆ? ಅವರು ಎಷ್ಟು ದಿನ ಕೇಂದ್ರ ಸಚಿವರಾಗಿದ್ದರು? ಅದರಿಂದ ರಾಜ್ಯಕ್ಕೆ, ದೇಶಕ್ಕೆ ಆಗಿರುವ ಉಪಯೋಗವೇನು? ಚಿದಂಬರಂ ನಿಜವಾಗಿಯೂ ಭೂಮಿಗೆ ಭಾರವಾಗಿ ಬದುಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಮೂದಲಿಸಿದರು.

loading...