ಚಿಮ್ಮಲಗಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ವನಿತಾ ಭೇಟಿ

0
15

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಚಿಮ್ಮಲಗಿ ತಾಂಡಾದಲ್ಲಾದ ಬಾಲಕಿ ಚೈತ್ರಾ ರಾಮಸ್ವಾಮಿ ಲಮಾಣಿ ಇವಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ವನಿತಾ ತೊರವಿ ಅವರು ಇಂದು ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಬಾಲಕಿಯ ತಂದೆ-ತಾಯಿಯಿಂದ ಘಟನೆ ಕುರಿತು ಮಾಹಿತಿ ಪಡೆದ ಅವರು, ಬಾಲಕಿಯ ಸಾವಿಗೆ ನ್ಯಾಯ ದೊರಕಿಸುವ ಭರವಸೆ ನೀಡಿ, ಸರಕಾರದಿಂದ ಬರಬಹುದಾದ ಪರಿಹಾರವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದರು, ಬಾಲಕಿಯ ಮೃತವಾದ ಸ್ಥಳ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ ನಿಡಗುಂದಿ ಪೋಲಿಸ್ ಠಾಣೆಯ ಪೋಲಿಸ್ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೌನೇಶ ಪೋತದಾರ, ವಾಣಿಶ್ರಿÃ ನಿಂಬಾಳ, ಹಾಗೂ ಗುರುರಾಜ ಇಟಗಿ ಇತರರು ಉಪಸ್ಥಿತರಿದ್ದರು.

loading...