ಚೀನಾ: ಪ್ರವಾಹಕ್ಕೆ ನಾಲ್ಕು ಬಲಿ, 7 ಮಂದಿ ಕಾಣೆ

0
9
ಬೀಜಿಂಗ್- ದಕ್ಷಿಣ ಚೀನಾದ ಶೆಂಝೆನ್ ನಗರದಲ್ಲಿ ಉಂಟಾಗಿರುವ ಭಾರಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದ್ದು, 7 ಮಂದಿ ಕಣ್ಮರೆಯಾಗಿದ್ದಾರೆ.
ನಿನ್ನೆ ರಾತ್ರಿ ಕಾರ್ಮಿಕರು ಸರೋವರ ಸ್ವಚ್ಛಗೊಳಿಸುವ ಹಾಗೂ ಇನ್ನು ಕೆಲವರು ಕಟ್ಟಡ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಸುರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ನಾಲ್ವರು ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದು,7 ಮಂದಿ ಕಣ್ಮರೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯ ಬಿರುಸಿನಿಂದ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ
loading...