ಜಗತ್ತು ಸಾಧಕನ ಸ್ವತ್ತು ಸೋಮಾರಿಗಳದ್ದಲ್ಲ: ಶಾಸಕ ಪಿ.ರಾಜೀವ್

0
37


ಕನ್ನಡಮ್ಮ ಸುದ್ದಿ
ಚಿಕ್ಕೋಡಿ 26: ಸಾಮಾಜಿಕ ಮೌಲ್ಯಗಳು ವ್ಯಕ್ತಿಯ ಸಾಧನೆಗೆ ಪೂರಕವಾಗಿದ್ದು, ಪ್ರತಿಯೊಬ್ಬ ವ್ಯಕ್ತಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡಬೇಕು ಎಂದು ಕುಡಚಿ ಶಾಸಕ ಪಿ.ರಾಜೀವ ಹೇಳಿದರು.
ತಾಲೂಕಿನ ಯಕ್ಸಂಬಾ ಪಟ್ಟಣದ ಸಹಕಾರ ಶಿಕ್ಷಣ ಮತ್ತು ಸಮಾಜ ಸೇವಾ ಸಂಸ್ಥೆಯಲ್ಲಿ ಆಯೋಜಿಸಲಾದ ಕ್ರೀಡಾ ಮತ್ತು ಸಾಂಸ್ಕøತಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಯಶಸ್ಸು ಸಿಗಬೇಕಾದರೆ ನಿತ್ಯ ನಿರಂತರ ಪ್ರಯತ್ನ ಅಗತ್ಯವಾಗಿದೆ. ‘ಜಗತ್ತು ಸಾಧಕನ ಸ್ವತ್ತು ಹೊರತು ಸೋಮಾರಿಗಳ ಸ್ವತ್ತಲ್ಲ’ ಒಬ್ಬ ವ್ಯಕ್ತಿ ಯಶಸ್ಸನ್ನು ಸಾಧಿಸಿದರೇ ಜಗತ್ತೇ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಈ ಭಾಗದಲ್ಲಿ ಮಹಿಳಾ ಸಬಲೀಕರಣ ಮತ್ತು ಸಮಾಜದ ಉನ್ನತಿಗಾಗಿ ಜೊಲ್ಲೆ ಮನೆತನದ ಕೊಡುಗೆ ಅಪಾರವಾಗಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಹಾಸ್ವಾಮೀಜಿ ವಿದ್ಯಾರ್ಥಿಗಳು ಸುಖ, ಸಂಪತ್ತು ಸಂತೋಷ, ನಿದ್ರೆ ತ್ಯಾಗ ಮಾಡಿ ಜ್ಞಾನ ಸಂಪಾದನೆ ಮಾಡಿದಾಗ ಮಾತ್ರ ವಿಧ್ಯಾರ್ಥಿ ಜೀವನ ಸಫಲವಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಸವಜ್ಯೋತಿ ಯುಥ್ ಫೌಂಡೆಶನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಾತನಾಡಿ ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗಾಗಿ ಮತ್ತು ಶೈಕ್ಷಣಿಕ ಮೌಲ್ಯಗಳಿಗೆ ಉತ್ತೇಜನ ನೀಡುವಲ್ಲಿ ನಮ್ಮ ಸಂಸ್ಥೆ ನಿರಂತರವಾಗಿ ಪ್ರಯತ್ನಸುತ್ತಿದೆ. ಸಹಕಾರ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ಬದಲಾಣೆಗಳನ್ನು ತರಲು ಜೊಲ್ಲೆ ಮನೆತನ ಸದಾ ಕಂಕಣಬದ್ದವಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರೇರಣಾ ಶಕ್ತಿ ಜ್ಯೋತಿಪ್ರಸಾದ ಜೊಲ್ಲೆ, ಬೀರೇಶ್ವರ ಸಂಸ್ಥೆಯ ಅಧ್ಯಕ್ಷ ಜಯಾನಂದ ಜಾಧವ, ಕಲ್ಲಪ್ಪಾ ಜಾಧವ, ಅನ್ವರ ದಾಡಿವಾಲೆ, ಸಭಾಪತಿ ಮತಾಬ ಮಕಾನದಾರ, ಶಿವರಾಜ ಜೊಲ್ಲೆ, ಸಂಯೋಜನಾಧಿಕಾರಿ ವಿಜಯ ರಾವುತ, ಕಾರ್ಯದರ್ಶಿ ತಾನಾಜಿ ಶಿಂಧೆ, ಮಹಾದೇವ ಪಾಟೀಲ, ರಾಕೇಶ ಮಗದುಮ್ಮ, ಡಾ. ಎ.ವಿ. ಕುಲಕರ್ಣಿ, ಎ.ಎ. ಅಕ್ಕೋಳೆ, ಪ್ರಾಚಾರ್ಯೆ ಉರ್ಮಿಳಾ ಚೌಗುಲೆ, ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

loading...