ಜನಪ್ರಿಯ ಯೋಜನೆ ರದ್ದುಪಡಿಸುವುದಿಲ್ಲ : ಸರ್ಕಾರದ ಸ್ಪಷ್ಟನೆ

0
6

ಬೆಂಗಳೂರು:-ಪ್ರತಿಪಕ್ಷ ಕಾಂಗ್ರೆಸ್ ನಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕಡಿತ, ಬಡವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಸುವ ಇಂದಿರಾ ಕ್ಯಾಂಟೀನ್ ಯೋಜನೆ ರದ್ದುಗೊಳಿಸುವ ಚಿಂತನೆಯನ್ನು ಹಾಲಿ ಬಿಜೆಪಿ ಸರ್ಕಾರ ಕೈಬಿಟ್ಟಿದೆ

ಹಿಂದಿನ ಸರ್ಕಾರಗಳ ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಡಿಸಿದ್ದಾರೆ.

ನಮ್ಮ ಸರ್ಕಾರ ಜನಪರ ಸರ್ಕಾರ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಹಾಗೂ ಇಂದಿರಾ ಕ್ಯಾಂಟೀನ್ ಯೋಜನೆಯ ಭಾಗಶಃ ಅನುದಾನಗಳಿಗೆ ಕತ್ತರಿ ಹಾಕುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಇದಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿ,ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದರು.

ಇದೀಗ ಯಡಿಯೂರಪ್ಪ ಯಾವುದೇ ಜನಪ್ರಿಯ ಯೋಜನೆಗಳನ್ನು ರದ್ದುಗೊಳಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಹಣಕಾಸು ಇಲಾಖೆಯ ಮೂಲಗಳು ಯೋಜನೆಗಳಿಗೆ ಮೀಸಲಾಗಿದ್ದ ನೆರವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ನೀಡಿವೆ.

loading...