ಜಿಂಕೆ ಕೊಂಬು ಸಾಗಿಸುತ್ತಿದ್ದ ಇಬ್ಬರ ಬಂಧನ

0
15

 

ಬೆಳಗಾವಿ

ಜಿಂಕೆ ಕೊಂಬು ಸಾಗಿಸುತ್ತಿದ್ದ ಇಬ್ಬರು ಅಂತರಾಜ್ಯರದ ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಅರಣ್ಯ ಸಂಚಾರಿ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

ನೆರೆಯ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಅಜರಾ ತೇಜಸ್ ತಾನಾಜಿ ಪಾಟೀಲ (24) ಹಾಗೂ ತುಷಾರ ತಾನಾಜಿ (26) ಬಂಧಿತರು. ಆರೋಪಿಗಳಿಂದ ತಲೆಯ ಎಲುಬು ಸಮೇತ ಇದ್ದ ಎರಡು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಬೇರೆ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಿ ಸಂಗ್ರಹಿಸಿದ ಕೊಂಬುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಕಳ್ಳರನ್ನು ಖೆಡ್ಡಾಗೆ ಕೆಡವಲು ಯಶಸ್ವಿಯಾಗಿದ್ದಾರೆ.
ಈ ದಾಳಿಯಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳಾದ ಆರ್.ಬಿ. ಯರನಾಳ, ಎಸ್.ಆರ್. ಅರಿಬೆಂಚಿ, ಕೆ.ಡಿ.ಹಿರೇಮಠ ಹಾಗೂ ಬಿ.ಇಂಗಳಗಿ ಭಾಗಿಯಾಗಿದ್ದರು. ಆರೋಪಿಗಳನ್ನು ನಿಪ್ಪಾಣಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ರಾಯಬಾಗ ಎಸಿಎಫ್ ಅರಣ್ಯ ಇಲಾಖೆ ಅವರು ತನಿಖೆ ಮುಂದುವರಿಸಿದ್ದಾರೆ.

loading...