ಜುಲೈ ೧೩ ರಂದು ರಾಷ್ಟಿçÃಯ ಲೋಕ ಅದಾಲತ್

0
11

ಗದಗ, ಜೂ. ೧೪ : ಜಿಲ್ಲೆಯಾದ್ಯಂತ ಸಾರ್ವಜನಿಕರ ಅನುಕೂಲಕ್ಕಾಗಿ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಜುಲೈ ೧೩ ರಂದು ನ್ಯಾಯಾಲಯದ ಆವರಣದಲ್ಲಿ ರಾಷ್ಟಿçÃಯ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಸ್. ಸಂಗ್ರೆÃಶಿ ಹೇಳಿದರು.
ಗದಗ ಜಿಲ್ಲಾ ಪ್ರಧಾನ ನ್ಯಾಯಾಲಯದ ಅವರಣದಲ್ಲಿಂದು ಜರುಗಿದ ರಾಷ್ಟಿçÃಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಟಿಯನ್ನುದ್ದೆÃಶಿಸಿ ಅವರು ಮಾತನಾಡಿದರು.
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಗದಗ ಜಿಲ್ಲೆಯ ಗದಗ, ರೋಣ, ಲಕ್ಷೆö್ಮÃಶ್ವರ, ಮುಂಡರಗಿ, ನರಗುಂದ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಅಂತಾ ಪರಿಗಣಿಸಿ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಜುಲೈ ೧೩ ರಂದು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟಿçÃಯ ಲೋಕ ಅದಾಲತ್ ಏರ್ಪಡಿಸಲಾಗಿದ್ದು ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಸಂಗ್ರೆÃಶಿ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿüಕಾರದ ಸದಸ್ಯ ಕರ‍್ಯದರ್ಶಿ ಎಸ್.ಜಿ. ಸಲಗರೆ ಮತ್ತಿತರರು ಉಪಸ್ಥಿತರಿದ್ದರು.

loading...