ಜ.25ರಿಂದ ಬೆಳಗಾವಿಯಲ್ಲಿ ಸಾವಯವ ಸಿರಿಧಾನ್ಯ ಮೇಳ: ಜಿಪಂ‌ ಸಿಇಒ

0
9

ಬೆಳಗಾವಿ

ಜನವರಿ 25ರಿಂದ ಎರಡು ದಿನಗಳ ಕಾಲ ಬೆಳಗಾವಿ ನಗರದ ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನ ಜರುಗಲಿದೆ ಎಂದು ಜಿಪಂ ಸಿಇಒ ರಾಜೇಂದ್ರ ಕೆ.ವಿ.ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯಗಳಿಂದ ಸರಿಯಾದ ಸಮಯಕ್ಕೆ ಹಾಗೂ ಸರಿಯಾದ ವೇಳೆ ಮಳೆ ಬಾರದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಸಾವಯವ ಮತ್ತು ಸಿರಿ ಧಾನ್ಯ ಮೇಳವನ್ನು ಡಿಸಿಎಂ ಲಕ್ಷ್ಮಣ ಸವದಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಚಿವ ಸುರೇಶ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ ಸೇರಿದಂತೆ ವಿವಿಧ ಗಣ್ಯಮಾನ್ಯರು ಉಪಸ್ಥಿತರಿರಲಿದ್ದಾರೆ ಎಂದರು.

ಸಾವಯವ ಸಿರಿಧಾನ್ಯ ಮೇಳದಲ್ಲಿ 75ಕ್ಕೂ ಅಧಿಕ ಮಳಿಗೆಗಳಿದ್ದು ಇದರಲ್ಲಿ ಸಿರಿಧಾನ್ಯ ಹಾಗೂ ಸಾವಯವ ಪದಾರ್ಥಗಳ ಕುರಿತು ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ ಎಂದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ‌ ಮಾಹಿತಿ ಮಳಿಗೆಗಳು ಸೇರಿದಂತೆ ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಸಸಿಗಖ ಪ್ರದರ್ಶನ ಮಾಡಲಿದ್ದಾರೆ ಎಂದರು.
ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟೆ, ಕೃಷಿ ಇಲಾಖೆಯ ಉಪನಿರ್ದೇಶಕ ಜಲಾನಿ ಮುಖಾಶಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...