ದಕ್ಷಿಣ ಪೆರುವಿನಲ್ಲಿ ಬಸ್ ಅಪಘಾತ : 11 ಸಾವು

0
5
ಮಾಸ್ಕೋ-  ಪೆರುವಿನ ದಕ್ಷಿಣ ಅರೆಕ್ವಿಪಾ ಪ್ರದೇಶದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ 11 ಜನರು ಮೃತಪಟ್ಟಿದ್ದು ಇತರ 40 ಜನರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಅರೆಕ್ವಿಪಾದಲ್ಲಿ ಪ್ಯಾನ್ ಅಮೆರಿಕಾನಾ ಸುರ್ ಹೆದ್ದಾರಿಯಲ್ಲಿ ಎರಡು ಬಸ್ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು ಐವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪ್ರಾದೇಶಿಕ ಸರ್ಕಾರ ತಿಳಿಸಿದೆ.
40 ಜನ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅತಿ ವೇಗ ಅಪಘಾತಕ್ಕೆ ಕಾರಣ ಇರಬಹುದು ಎಂದು ಹೇಳಲಾಗಿದೆ.
loading...