ದೌರ್ಜನ್ಯ ಪ್ರಕರಣ: ನಟ ದಿಲೀಪ್ ಜಾಮೀನು ಅರ್ಜಿ ವಜಾ

0
33

ಕೊಚ್ಚಿ:- ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದಿಲೀಪ್ ಅವರು ನಾಲ್ಕನೆ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ನಟ ದಿಲೀಪ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಅಂಗಮಲ್ಯ ಮ್ಯಾಜಿಸ್ಟ್ರೇಟ್ ಕೋರ್ಟ್, ಆರೋಪಿ 60 ದಿನ ಜೈಲಿನಲ್ಲಿ ಕಳೆದಿದ್ದರೂ ಕಾನೂನು ಬದ್ಧ ಜಾಮೀನಿಗೆ ಅರ್ಹತೆ ಹೊಂದಿಲ್ಲ ಎಂದು ಹೇಳಿದೆ. ಈ ಹಿಂದೆ ಇದೇ ಕೋರ್ಟ್ ಮಲೆಯಾಳಂ ನಟನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ ಕೇರಳ ಹೈಕೋರ್ಟ್ ಎರಡು ಬಾರಿ ದಿಲೀಪ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

loading...