ನಮ್ಮ ದೇಶ ಜಗತ್ತಿನಲ್ಲಿಯೇ ಬಲಾಡ್ಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ: ಸಚಿವ ಅನಂತಕುಮಾರ

0
23

ಕನ್ನಡಮ್ಮ ಸುದ್ದಿ-ಮುಂಡಗೋಡ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ನಮ್ಮ ದೇಶ ಸಾಕಷ್ಟು ಪ್ರಗತಿ ಸಾದಿಸಿದ್ದು, ಜಗತ್ತಿನಲ್ಲಿಯೇ ಬಲಾಡ್ಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು.
ಮಂಗಳವಾರ ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಪ.ಪಂ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳ ಹಾಗೂ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುಮಟಾ-ಶಿರಸಿ-ಮುಂಡಗೋಡ-ಹುಬ್ಬಳ್ಳಿ ಹೆದ್ದಾರಿ ಈಗ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಅಲ್ಲದೇ ಸುತ್ತಮುತ್ತಲಿನ ಬಹುತೇಕ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಲಾಗಿದೆ. ಆಯುಷ್ಮಾನ ಆರೋಗ್ಯ ಸೇರಿದಂತೆ ಕೇಂದ್ರ ಸರ್ಕಾರದ ಜನಪರವಾದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಮೂಲಕ ಪಕ್ಷಾತೀತವಾಗಿ ಅರ್ಹ ಪಲಾನುಭವಿಗಳಿಗೆ ತಲುಪಿಸುವ ಕೆಲಸ ಕಾರ್ಯಕರ್ತರಿಂದ ನಡೆಯಬೇಕಿದೆ ಎಂದು ಹೇಳಿದರು. ಮಾಜಿ ಶಾಸಕ ವಿ.ಎಸ್‌.ಪಾಟೀಲ, ದುರೀಣ ಉಮೇಶ ಭಾಗ್ವತ, ಜಿ.ಪಂ ಸದಸ್ಯ ಎಲ್‌.ಟಿ.ಪಾಟೀಲ, ಮಾಜಿ ಜಿ.ಪಂ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಗುಡ್ಡಪ್ಪ ಕಾತೂರ, ವಿನಾಯಕ ರಾಯ್ಕರ, ಗಜು ಭಟ್‌, ಮಹೇಶ ಹೊಸಕೊಪ್ಪ, ಪಣಿರಾಜ ಹದಳಗಿ, ನಾಗಭೂಷಣ ಹಾವಣಗಿ, ಉಮೇಶ ಬಿಜಾಪುರ, ಬಸವರಾಜ ಠಣಕೆದಾರ ಮುಂತಾದವರು ಉಪಸ್ಥಿತರಿದ್ದರು.

loading...