ನಾಳೆ ಬೆಳಗಾವಿಗೆ ಆರ್.ವಿ ದೇಶಪಾಂಡೆ

0
2

ಬೆಳಗಾವಿ: ರಾಜ್ಯ ಕಂದಾಯ ಸಚಿವರಾದ ಆರ್.ವಿ. ದೇಶಪಾಂಡೆ ಅವರು ಮೇ ೧೮ ರಂದು ಬೆಳಗಾವಿ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸಚಿವರು ಮೇ ೧೮ರ ಮುಂಜಾನೆ ೮-೪೦ ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ ೯ ಗಂಟೆಯಿಂದ ೧೧ ಗಂಟೆಯವರೆಗೆ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವರು. ನಂತರ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...