ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಮನವಿ

0
29

ಬೆಳಗಾವಿ: ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಜನರು ಜನಜಾನುವಾರು, ಆಸ್ತಿ, ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇದರಿಂದಾಗಿ ರಾಜ್ಯ ಸರ್ಕಾರ ಸೂಕ್ತವಾದ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳು ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಉತ್ತರ ಕರ್ನಾಟಕದಲ್ಲಿಯಾದ ಪ್ರವಾಹದಿಂದ ಅನೇಕ ಸಾವು ನೋವುಗಳು ಉಂಟಾಗಿದೆ. ರೈತರ ಬೆಳೆ ನೀರಿನಲ್ಲಿ ಕೊಚ್ಚಿ ಸಂಪೂರ್ಣನಾಶವಾಗಿದೆ. ರಾಜ್ಯದ ೨೨ ಜಿಲ್ಲೆಗಳಲ್ಲಿ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ರಾಜ್ಯ ಸರಕಾರ ಪ್ರತಿ ಎಕರೆಗೆ ೫೦ ಸಾವಿರ, ಮನೆ ಕಳೆದುಕೊಂಡವರಿಗೆ ೧೦ ಲಕ್ಷ ಹಾಗೂ ಮೃತ ಪಟ್ಟ ಕುಟುಂಬಕ್ಕೆ ೨೫ ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಮನವಿಯಲ್ಲಿ ಎಂದು ಒತ್ತಾಯಿಸಿದ್ದಾರೆ.
ಅದೇ ರೀತಿ ರೈತರ ಒತ್ತಾಯ ಪೂರ್ವಕವಾಗಿ ಬೆಳಗಾವಿ ಹಲಗಾ ಮಚ್ಛೆ ಬೈಪಾಸ್ ಹಾಗೂ ರಿಂಗ್ ರೋಡ್ ನಿರ್ಮಾಣ ಮಾಡಲು ತೆಗೆದುಕೊಂಡಿರುವ ಜಮೀನನ್ನು ವಾಪಾಸ್ ನೀಡುವ ಮೂಲಕ ಅಲ್ಲಿ ನಡೆಸುತ್ತಿರುವ ಕಾಮಗಾರಿಯನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಇದೇ ೨೬ರಂದು ರೈತರಿಂದ ಜಿಲ್ಲಾಧಿಕಾರಿ ಮುತ್ತಿಗೆ ಹಾಕಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರಮಪ್ಪ ಖೇಮಲಾಪುರೆ ಸೇರಿದಂತೆ ರೈತರು ಭಾಗಿಯಾಗಿದ್ದರು.

loading...