ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ

0
8

ಬೆಂಗಳೂರು
ಅಶ್ಲೀಲ ವಿಡಿಯೋ ಸಿಡಿ ವಿಚಾರಕ್ಕೆ ಸಂಬAಧಿಸಿದAತೆ ಸರಕಾರಕ್ಕೆ ಮುಜುಗರ ತಪ್ಪಿಸಲು ರಮೇಶ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ.
ಅಶ್ಲೀಲ ವಿಡಿಯೋ ಸಿಡಿ ವಿಚಾರಕ್ಕೆ ಸಂಬAಧಿಸಿದAತೆ ಸರಕಾರಕ್ಕೆ ಮುಜುಗರ ತಪ್ಪಿಸಲು ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂಗೆ ರವಾನಿಸಿದ್ದು, ಈ ಪ್ರಕರಣದಿಂದ ನಿರ್ಷೋಶಿಯಾದ ಬಳಿಕ ನನಗೆ ಮತ್ತೇ ಸಚಿವ ಸ್ಥಾನ ನೀಡಬೇಕೆಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಶ್ಲೀಲ ವಿಡಿಯೋ ಬಹಿರಂಗವಾದ 20 ಗಂಟೆಯಲ್ಲಿಯೇ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಹಿಂದೆ ಇರುವವರು ಯಾರು ಎನ್ನುವುದು ಈಗ ಗುಸು ಗುಸು ಚರ್ಚೆಗಳು ನಡೆದಿವೆ.
ಗುರುವಾರ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಕಾಂಗ್ರೆಸ್, ಜೆಡಿಎಸ್ ಬೃಹತ ಪ್ರತಿಭಟನೆ ನಡೆಸಿ ರಮೇಶ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿದ್ದರು. ಅಲ್ಲದೆ ಸಂತ್ರಸ್ತೆಗೆ ನ್ಯಾಯ ಸಿಗಬೇಕು. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದ್ದರು. ಒಟ್ಟಾರೆ ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದರ ಮೂಲಕ ಈ ಪ್ರಕರಣದ ಗೊಂದಲಕ್ಕೆ ತೆರೆ ಏಳೆದಿದೆ.

loading...