ಪದಾಧಿಕಾರಿಗಳ ನೇಮಕ

0
28

ಕನ್ನಡಮ್ಮ ಸುದ್ದಿ-ಮುಂಡರಗಿ: ಪಟ್ಟಣದ ಶ್ರೀಜಗದ್ಗುರು ಅನ್ನದಾನೀಶ್ವರ ಪ್ರೌಢ ಶಾಲೆಯ ಶಿಕ್ಷಕ ಎಸ್.ಸಿ.ಚಕ್ಕಡಿಮಠ ಅವರನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರನ್ನಾಗಿ, ಎಸ್.ವೈ.ನಾಯಕ ಅವರನ್ನು ಕಾರ್ಯದರ್ಶಿಯನ್ನಾಗಿ ಮತ್ತು ಎಸ್.ವಿ.ಮುಂಡರಗಿ ಅವರನ್ನು ಸಂಘಟನಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಸಂಚಾಲಕ ಎಸ್.ಎಂ.ಕೊಟಗಿ ಹೇಳಿದರು.
ಪಟ್ಟಣದ ಅನ್ನದಾನೀಶ್ವರ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ತಾಲೂಕು ಘಟಕದ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿದ್ದ ಎಸ್.ಎಂ.ಅಗಡಿ ಅವರು ತಾವೆ ಸ್ವಯಂ ಘೋಶಿತ ಅಧ್ಯಕ್ಷರೆಂದು ಪತ್ರಿಕೆಗಳಲ್ಲಿ ಹೇಳಿಕೆ ನೀಡಿ ಶಿಕ್ಷಕರ ಹಾದಿ ತಪ್ಪಿಸುತ್ತಿದ್ದಾರೆ. ಅವರು ಇದೇ ಪ್ರವೃತ್ತಿಯನ್ನು ಮುಂದುವರಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದ 9 ಶೈಕ್ಷಣಿಕ ಜಿಲ್ಲೆಗಳಲ್ಲಿ ಈ ಹಿಂದೆ ಇದ್ದ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಹೆಸರನ್ನು ಬದಲಾಯಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘವೆಂದು ಮರು ನಾಮಕರಣ ಮಾಡಲಾಗಿದೆ. ಈ ಜಿಲ್ಲೆಗಳ ಪ್ರತಿ ತಾಲ್ಲೂಕಿನಲ್ಲಿ ತಾಲ್ಲೂಕು ಘಟಕವನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ತಿಳಿಸಿದರು. ಮಾಧ್ಯಮಿಕ ನೌಕರರ ಸಂಘದ ರಾಜ್ಯ ಸಲಹೆಗಾರ ಡಾ.ಬಸವರಾಜ ಧಾರವಾಡ ಮಾತನಾಡಿ, ಗದಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಕಡಿಮೆ ನೀಡಿದ ಪ್ರೌಢಶಾಲಾ ಸಿಬ್ಬಂದಿ ಮತ್ತು ಮುಖ್ಯೋಪಾಧ್ಯಾಯರಿಗೆ ಮೇಲಾಧಿಕಾರಿಗಳು ಅನವಶ್ಯಕವಾಗಿ ಕಿರುಕುಳ ನೀಡುತ್ತಿದ್ದಾರೆ. ಕಡಿಮೆ ಫಲಿತಾಂಶ ನೀಡುವ ಶಿಕ್ಷಕರನ್ನು ಗುರುತಿಸಿ ಅಧಿಕಾರಿಗಳು ಅವರಿಗೆ ಕಾರ್ಯಾಗಾರಗಳನ್ನು ಏರ್ಪಡಿಸಿ ಫಲಿತಾಂಶ ಸುಧಾರಿಸುವಲ್ಲಿ ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿಕೊಂಡರು. ಪಿ.ಎಂ.ಪಾಟೀಲ, ಎಸ್.ಎಂ.ಹೊಸಮಠ, ಕೆ.ಎ.ಹಿರೇಮಠ, ಎಸ್.ಸಿ.ಚಕ್ಕಡಿಮಠ, ಎಸ್.ವಿ.ಮುಂಡರಗಿ ಹಾಜರಿದ್ದರು.

loading...