ಪಾಲಿಕೆಯ ತೆರಿಗೆ ವರ್ಷದ ಬಳಿಕ ಸಂಗ್ರಹ: ಸಚಿವ ಜಾರಕಿಹೊಳಿ

0
24

ಬೆಳಗಾವಿ
ಕೊರೋನಾ ಮಹಾಮಾರಿಯಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಜನರಿಗೆ ಅನಕೂಲವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿ ತೆರಿಗೆ ಸಂಗ್ರಹ ಮಾಡುವುದನ್ನು ಒಂದು ವರ್ಷ ಮುಂದೂಡಿದೆ. ಬೆಳಗಾವಿ ಮಹಾನಗರ ಪಾಲಿಕೆ ತೆರಿಗೆ ಸಂಗ್ರಹವನ್ನು ಒಂದು ವರ್ಷ ಮುಂದೆ ಹಾಕಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸೋಮವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೆರಿಗೆ ತುಂಬಲು ಕಷ್ಟವಾಗುತ್ತದೆ ಎಂದು ರಾಜ್ಯ ಸರಕಾರ ಒಂದು ವರ್ಷ ತೆರಿಗೆ ಸಂಗ್ರಹ ಮಾಡುವುದನು ಮುಂದೆ ಹಾಕಿದೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿಯೂ ಜನರು ಸಾಕಷ್ಟು ನೋವುಗಳನ್ನು ಅನುಭವಿಸಿದ್ದಾರೆ. ಈ ದೃಷ್ಟಿಯಲ್ಲಿ ಮಹಾನಗರ ಪಾಲಿಕೆಯ ಒಂದು ವರ್ಷದ ತೆರಿಗೆಯನ್ನು ಸಾರ್ವಜನಿಕರಿಂದ ಭರಿಸಿಕೊಳ್ಳದಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

loading...