ಪ್ರಧಾನಿ ಮೋದಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರೊಂದಿಗೆ ಚರ್ಚೆ

0
7

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಕರೆ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, “ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕರೆ ಮಾಡಿ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.
ನಂತರ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಜಗನಮೋಹನ ರೆಡ್ಡಿ ಅವರನ್ನು ಭೇಟಿಯಾದ ಪ್ರಧಾನಿ ಮೋದಿ, ರಾಜ್ಯದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನಮೋಹನರೆಡ್ಡಿ ಅವರೊಂದಿಗೆ ಸಭೆ ನಡೆಸಿದ್ದೇನೆ. ಆಂಧ್ರಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ತರ ವಿಷಯಗಳ ಬಗ್ಗೆ ಸಂವಾದ ನಡೆಸಿದೆವು. ನನ್ನ ಅವಧಿಯಲ್ಲಿ ಕೇಂದ್ರದಿಂದ ಎಲ್ಲಾ ರೀತಿಯ ಬೆಂಬಲವನ್ನು ನೀಡುವ ಭರವಸೆ ನೀಡಿರುವುದಾಗಿ ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿದ ನಂತರ ಪ್ರಧಾನಮಂತ್ರಿ ನಿವಾಸದಲ್ಲಿ ಮೋದಿ ಅವರನ್ನು ಭೇಟಿಯಾದ ರೆಡ್ಡಿ, ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಅವರು ಪಕ್ಷದ ಬೇಡಿಕೆಗಳಾದ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ, ರಾಜ್ಯ ಮರುಸಂಘಟನಾ ಕಾಯ್ದೆಯ ಜಾರಿ, ಪೊಲವರಂ ಯೋಜನೆ, ಕಡಪ ಉಕ್ಕಿನ ಘಟಕ, ಹಿಂದುಳಿದ ಜಿಲ್ಲೆಗಳು, ದುಗರಾಜಪಟ್ಟಣ ಬಂದರಿಗೆ ಹಣ ಬಿಡುಗಡೆ ಹಾಗೂ ವಿಜಾಗ್ ಮತ್ತು ವಿಜಯವಾಡಗಳಲ್ಲಿ ಮೆಟ್ರೋ ರೈಲು ಯೋಜನೆಗೆ ವೇಗ ನೀಡುವುದು ಮತ್ತಿತರ ಬೇಡಿಕೆಗಳನ್ನು ಪ್ರಧಾನಿ ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವೈಎಸ್ ಆರ್ ಕಾಂಗ್ರೆಸ್ ಪಕ್ಷ 151 ಸ್ಥಾನಗಳೊಂದಿಗೆ ಬಹುಮತ ಸಾಧಿಸಿದ್ದು ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 21 ಸ್ಥಾನಗಳನ್ನು ಗಳಿಸಿದೆ.

loading...