ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯಕ್ಕಾಗಿ ಶೀಘ್ರ ಸ್ವಯಂ ಘೋಷಣೆ ಸಲ್ಲಿಸಿ

0
25

ಕನ್ನಡಮ್ಮ ಸುದ್ದಿ-ಕೊಪ್ಪಳ :
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಶೀಘ್ರವಾಗಿ ಸ್ವಯಂ ಘೋಷಣೆಯನ್ನು ಸಲ್ಲಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ಜಿಲ್ಲೆಯ ರೈತ ಬಾಂದವರಲ್ಲಿ ಮನವಿ ಮಾಡಿದ್ದಾರೆ.

ಭಾರತ ಸರ್ಕಾರವು ರೈತರ ಆದಾಯ ವೃದ್ಧಿಸಲು ಫೆಬ್ರವರಿ. ೦೧ ರಲ್ಲಿ “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್)” ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯಡಿ ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ೩ ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು ರೂ ೬,೦೦೦/- ಗಳನ್ನು ನೀಡಲು ಉದ್ದೆÃಶಿಸಿದೆ.

ಆದ್ದರಿಂದ ಕೊಪ್ಪಳ ಜಿಲ್ಲೆಯ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ ಅಥವಾ ಅಟಲ್ ಜೀ ಜನಸ್ನೆÃಹಿ ಕೇಂದ್ರಕ್ಕೆ ತೆರಳಿ ಸ್ವಯಂ ಘೋಷಣೆ ಅನುಬಂಧದಲ್ಲಿ ತಮ್ಮ ಹೆಸರು, ಆಧಾರ್ ಸಂಖ್ಯೆ, ಜಮೀನಿನ ವಿವರ, ಮುಂತಾದ ವಿವರಗಳನ್ನು ನಮೂದಿಸಿ ಸ್ವಯಂ ಘೋಷಣೆಯನ್ನು ಜೂನ್. ೩೦ ರೋಳಗಾಗಿ ನೀಡಬೇಕು.

ಜೂನ್. ೩೦ ರೊಳಗಾಗಿ ರೈತರು ನೊಂದಣಿ ಮಾಡಿಕೊಳ್ಳದಿದ್ದರೆ ಅವರು ಒಂದನೇ ಕಂತಿ ಸಹಾಯಧನದಿಂದ ವಂಚಿತರಾಗಬಹುದು. ಆದ್ದರಿಂದ ರೈತರು ಕೊನೆಯ ದಿನಾಂಕದ ಒಳಗಾಗಿ ನೊಂದಣಿ ಮಾಡಿಕೊಳ್ಳಲು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...