ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ 10ಲಕ್ಷ ಪರಿಹಾರ ನೀಡಬೇಕು: ಈಶ್ವರ ಖಂಡ್ರೆ

0
27

ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ 10ಲಕ್ಷ ಪರಿಹಾರ ನೀಡಬೇಕು: ಈಶ್ವರ ಖಂಡ್ರೆ
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರತಿಯೊಂದು ಕುಟುಂಬಕ್ಕೆ 10 ಲಕ್ಷ ಹಾಗೂ ಸಾವನ್ನಪಿದ ಮೃತ ಕುಟುಂಬಕ್ಕೆ 10ಲಕ್ಷ ರೂ. ಪರಿಹಾರವನ್ನು ರಾಷ್ಟ್ರೀಯ ವಿಪತ್ತು ನಿರ್ಮಾಣ ನಿಧಿಯಿಂದ ನೀಡಬೇಕೆಂದು ಎಐಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಮಂಗಳವಾರ ನಗರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ ಅವರು ಮಾಧ್ಯಮದೊಂದಿಗೆ ಮಾತನಾಡಿ, ಉತ್ತರ ಕರ್ನಾಟಕ ದಲ್ಲಿ ಪ್ರಕೃತಿ ವಿಕೋಪದಿಂದ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿದ್ದಾರೆ‌. ಅದರಲ್ಲೂ ಬೆಳಗಾವಿಯಲ್ಲಿ 60 ರಿಂದ 70 ಸಾವಿರ ಕುಟುಂಬಗಳು ಬೀದಿಗೆ ಬಂದಿವೆ. ಆದ್ದರಿಂದ ಸರಕಾರ
ರಾಷ್ಟ್ರೀಯ ವಿಪತ್ತು ನಿರ್ಮಾಣ ನಿಧಿಯಿಂದ ಹೆಚ್ಚಿನ ಅನುದಾನ ನೀಡುವ ಮೂಲಕ ಸಂತ್ರಸ್ತರ ಪ್ರತಿ ಕುಟುಂಬಕ್ಕೆ 10ಲಕ್ಷ ಮನೆ ನಿರ್ಮಾಣಕ್ಕೆ , ಪ್ರವಾಹದಲ್ಲಿ ಮೃತ ಪಟ್ಟ ಕುಟುಂಬಕ್ಕೆ 10ಲಕ್ಷ ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

ಇನ್ನೂ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು.

loading...