ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬಿಜೆಪಿ ಮುಖಂಡರಿಂದ ಪರಿಶೀಲನೆ: ಸಂತ್ರಸ್ತರಿಗೆ ಸಾಂತ್ವನ

0
4

ಬೆಂಗಳೂರು-ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಯನ ತಂಡ ಪರಿಶೀಲನೆ ನಡೆಸುತ್ತಿದ್ದು, ಇಂದು ಹಲವೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದ ಬಿಜೆಪಿ ತಂಡ ಇಂದು ಬಾಗಲಕೋಟೆ ಜಿಲ್ಲೆಯ ನಾನೇಗಿಲಿ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಅಹವಾಲು ಆಲಿಸಿದೆ.
ಈ ವೇಳೆ ಪ್ರವಾಹ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಒದಗಿಸಿಕೊಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮತ್ತೊಂದೆಡೆ ಸಂಸದ ಅನಂತ್ ಕುಮಾರ್ ಹೆಗಡೆ ಅವರ ನೇತೃತ್ವದ ಬಿಜೆಪಿ ತಂಡ ಶಿರಸಿಯ ಚಿಗಳ್ಳಿ ಅಣೆಕಟ್ಟೆ ಒಡೆದು ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ವೇಳೆ ಅಲ್ಲಿ ನೆರೆದಿದ್ದ ಭಾರೀ ಸಂಖ್ಯೆಯ ರೈತರು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಸಂಸದರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

loading...