ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕೆ ಭೂಮಿ ಒದಗಿಸಿದರೆ ತಕ್ಷಣ ಕಾಮಗಾರಿ ಆರಂಭ: ಕೇಂದ್ರ ಸಚಿವ ಅಂಗಡಿ

0
5

ಬೆಳಗಾವಿ
ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬAಧಿಸಿದAತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು.
ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊAಡರೆ ಡಿಪಿಆರ್ ಮತ್ತು ಹಣ ಬಿಡುಗಡೆ ಪ್ರಕ್ರಿಯೆ ಸುಗಮವಾಗಲಿದೆ. ಆದ್ದರಿಂದ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸುವAತೆ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಂಪೂರ್ಣ ಜಮೀನು ಒದಗಿಸುವುದು ಹಾಗೂ ಯೋಜನೆ ಕಾಮಗಾರಿಯ ಶೇ.೫೦ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕಿರುವುದರಿಂದ ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಈ ಕೆಲಸ ಪೂರ್ಣಗೊಳಿಸಿದರೆ ಯೋಜನೆ ಅನುಷ್ಠಾನ ಸುಲಭವಾಗಲಿದೆ ಎಂದು ಸುರೇಶ್ ಅಂಗಡಿ ಹೇಳಿದರು.
ಭೂಮಿ ಗುರುತಿಸಿಕೊಡುವ ಕೆಲಸ ರೈಲ್ವೆ ಇಲಾಖೆಯ ಅಧಿಕಾರಿಗಳು ಹದಿನೈದು ದಿನದೊಳಗೆ ಪೂರ್ಣಗೊಳಿಸಬೇಕು. ಅದಾದ ಬಳಿಕ ಸ್ವಾಧೀನ ಪ್ರಕ್ರಿಯೆಯನ್ನು ಉಭಯ ಜಿಲ್ಲಾಧಿಕಾರಿಗಳು ಆರಂಭಿಸಬೇಕು ಎಂದು ಸೂಚನೆ ನೀಡಿದರು.
ಇನ್ನುಳಿದ ೧೧೪ ಎಕರೆ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಅರಣ್ಯ ಇಲಾಖೆಗೆ ಸಂಬAಧಿಸಿದ ೪೧ ಎಕರೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ ಹದಿನೈದು ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಸದ ಪಿ.ಸಿ.ಗದ್ದಿಗೌಡರ, ಲೋಕಾಪುರ ಮತ್ತು ಭಾಗದಲ್ಲಿ ಬೇರೆ ಬೇರೆ ಕಾರಣಕ್ಕೆ ಮಾರ್ಗದ ಅಲೈನ್ ಮೆಂಟ್ ಬದಲಾವಣೆ ಮಾಡುತ್ತಿರುವುದು ಕಾಮಗಾರಿ ವಿಳಂಬವಾಗುತ್ತಿದೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಆದ್ಯತೆ ನೀಡಬೇಕು ಎಂದು ಹೇಳಿದರು.

loading...