ಗೋಕಾಕ : 12 ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಕೌಟುಂಬಿಕ ಜವಾಬ್ದಾರಿಯನ್ನು ಹೆಗಲಿಗೇರಿಸುವುದು ಕಾನೂನು ಬಾಹೀರ. ಹೀಗೆ ಜವಾಬ್ದಾರಿ ಹೊರುವ ಮಕ್ಕಳೇ ಬಾಲ ಕಾರ್ಮಿಕರು. ಇವರ ಭವಿಷ್ಯದ ಕುರಿತು ಚಿಂತನೆ ಮಾಡುವುದೇ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾನೂನಿನ ಮೂಲಧ್ಯೇಯ ಎಂದು ತಹಶೀಲ್ದಾರ ಎಸ್.ಆರ್.ಶಿರಕೋಳ ಹೇಳಿದರು.
ಅವರು ಗುರುವಾರ ಇಲ್ಲಿಯ ತಾ.ಪಂ. ಸಭಾಭವನದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಿವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಾನೂನಿನ ಇಷ್ಟೊಂದು ನಿಷೇಧದ ನಡುವೆಯೂ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೂಕುವ ಕೌಟುಂಬಿಕ ನಿಷ್ಕಾಳಿಜಿತನ ವಿಷಾಧನೀಯ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಎಚ್.ಎಸ್.ಮಂಜುನಾಥ ಅವರು ಮಾತನಾಡಿ, ಮುಂದುವರೆದ ರಾಷ್ಟ್ತ್ರಗಳಲ್ಲಿ ಬಾಲಾಪರಾಧ ನಿಷೇಧ ಕಾನೂನನ್ನು ಯಶಸ್ವೀಯಾಗಿ ಅನುಷ್ಠಾನಗೊಳಿಸುವಂತೆಯೇ ಭಾರತದಲ್ಲೂ ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಪೀಠಾಸೀನ ಅಧಿಕಾರಿಗಳೂ ಆಗಿರುವ ಇಲ್ಲಿಯ ತ್ವರಿತ ಗತಿ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಎ.ಡಿ.ಮಹಾಂತಪ್ಪ ಅವರು ಮಾತನಾಡಿ, ಅಪ್ರಾಪ್ತ ವಯಸ್ಕರನ್ನು ಕಡಿಮೆ ಸಂಬಳಕ್ಕಾಗಿ ದುಡಿಸಿಕೊಳ್ಳುವ ಸಾಕಷ್ಟು ನಿದರ್ಶನಗಳು ಎಲ್ಲರ ಕಣ್ಣಿಗೂ ಬೀಳುತ್ತಿದ್ದರೂ ಅವುಗಳನ್ನು ಸಂಬಂಧ ಪಟ್ಟ ಇಲಾಖೆ ಇಲ್ಲವೇ ಅಧಿಕಾರಿಗಳ ಗಮನಕ್ಕೆ ತರುವ ಕೆಲಸ ಆಗಬೇಕು. ಈ ದೆಶೆಯಲ್ಲಿ ನಾವು ಪ್ರಾಮಾಣಿಕವಾಗಿ ನಮ್ಮ ಜವಾಬ್ದಾರಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಪ್ರಮಾಣ ಬೇಕು. ಪ್ರತಿಯೊಂದು ಅಂಗಡಿ ಮತ್ತು ಕಾರ್ಖಾನೆಗಳಲ್ಲಿ ಬಾಲ ಕಾರ್ಮಿಕರನ್ನು ಸೇವೆಗೆ ತೆಗೆದುಕೊಳ್ಳುವುದಿಲ್ಲ ಎಂಬ ನಾಮಫಲಕ ಹಾಕಿರಬೇಕು ಎಂದು ಹೇಳಿದರು.
ವೇದಿಕೆಯಲ್ಲಿ 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಗೀರೀಶ ಭಟ್ ಕೆ., ಪ್ರಧಾನ ದಿವಾಣಿ ನ್ಯಾಯಾಧೀಶ ವಿ.ಎಸ್.ಪಾಟೀಲ, ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಕೆ.ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಸಿ.ಡಿ.ಹುಕ್ಕೇರಿ, ಕಾರ್ಮಿಕ ನೀರೀಕ್ಷಕ ಸುಧೀಂಧ್ರ ಉಪಸ್ಥಿತರಿದ್ದರು.
ಹಿರಿಯ ವಕೀಲೆ ಸಂಗೀತಾ ಬನ್ನೂರ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕರಾಗುವುದಿಲ್ಲ ಎಂದು ಪ್ರಮಾಣ ವಚನ ಬೋಧಿಸಲಾಯಿತು. ದಿನಾಚರಣೆ ಪ್ರಯುಕ್ತ ನಗರದ ಪ್ರಮುಖ ಬೀದಿಗಳ ಮೂಲಕ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾ ನಡೆಯಿತು.
ಗೋಕಾಕ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್.ಜೋಡಗೇರಿ ಸ್ವಾಗತಿಸಿದರು. ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಬಿ.ಎಸ್.ಪುಠಾಣಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣಾಧಿಕಾರಿ ವಿಜಯಕುಮಾರ ಸುಲೇಗಾಂವಿ ವಂದಿಸಿದರು.
ಗುರುವಾರದಂದು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಜರುಗಿದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಎಸ್.ಆರ್.ಶಿರಕೋಳ ಉದ್ಘಾಟಿಸಿದರು.
ಗುರುವಾರದಂದು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು.
loading...
Super
So good essay I am having this essay in my test in Kanva Public school Nelamangala Bangalore.