ಬೆಳಗಾವಿಗೆ ಆಗಮಿಸಿದ ಬಿಜೆಪಿ ಚಾಣಕ್ಯ

0
49

ಬೆಳಗಾವಿ

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿ ಬೆಳಗ್ಗೆ 11.32ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದರು. ಕೇಂದ್ರ ಸಚಿವ ಅಮಿತ್ ಶಾ ಜತೆಗೆ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಶಾಸಕರಾದ ಮಹೇಶ ಕುಮಠಳ್ಳಿ, ಅಭಯ ಪಾಟೀಲ, ಅನಿಲ್‌ ಬೆನಕೆ, ಮಹಾದೇವಪ್ಪ ಯಾದವಾಡ ಸ್ವಾಗತ ಕೊರಿದರು.

 

loading...