ಬೆಳಗಾವಿ ಲೋಕಸಭಾ ಅಭ್ಯರ್ಥಿ ಬಗ್ಗೆ ಚರ್ಚೆಯಾಗಲ್ಲ: ಅರುಣ್ ಸಿಂಗ್

0
55

 

ಬೆಳಗಾವಿ

ಬೆಳಗಾವಿ ಲೋಕಸಭಾ ಚುನಾವಣೆ ಟಿಕೆಟ್ ಬಗ್ಗೆ ಚರ್ಚೆಯಾಗುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಭಾನುವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅಭೂತ ಪೂರ್ವ ಜಯಶಾಲಿಯಾಗಲಿದ್ದಾರೆ. ಆದರೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಇಂದು ಬಹಳ ಸಂತೋಷದ ದಿನ ರಾಜ್ಯ ಬಿಜೆಪಿಯಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂದು ಸಭೆ ಇದೆ. ನೋಡೋಣ ಅವರ ಸಮಸ್ಯೆಯನ್ನು ಸ್ವತಃ ಕೇಂದ್ರ ಗೃಹ ಸಚಿವರೇ ಆಲಿಸಲಿದ್ದಾರೆ ಎಂದರು.

 

loading...