ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯ ಪಂಚ ಪಾಂಡವರಲ್ಲಿ ಒಬ್ಬರಿಗೆ ಟಿಕೆಟ್ ಪಕ್ಕಾ

0
144

 

ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯ ಸ್ಪರ್ಧೆಗೆ ೭೦ ಜನ ಆಕಾಂಕ್ಷಿಗಳ ನಡುವೆ ಕೇವಲ ಪಂಚಪಾoಡವರ ಹೆಸರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶಿಪಾರಸ್ಸು ಮಾಡಿದ್ದಾರೆ.

(ಶೃದ್ದಾ ಅಂಗಡಿ )                        (ಎಂ.ಬಿ.ಜೀರಲಿ)                      (ಡಾ. ವಿಶ್ವನಾಥ ಪಾಟೀಲ)

ಹೌದು. ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಲ್ಲಿ ಸುಮಾರು ೭೦ಕ್ಕೂ ಹೆಚ್ಚು ಆಕಾಂಕ್ಷಿಗಳು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದರು. ಏ.೧೭ರಂದು ಬೆಳಗಾವಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ, ಬಿಜೆಪಿ ಗ್ರಾಮೀಣ ಘಟದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಬಿಜೆಪಿ ವಕ್ತಾರ ಎಂ.ಬಿ.ಜೀರಲಿ, ಬೃಹತ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹಾಗೂ ದಿ. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಶೃದ್ದಾ ಅಂಗಡಿ ಅವರ ಹೆಸರನ್ನು ಶಿಪಾರಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ.

(ಬೃಹತ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್)  (ಬಿಜೆಪಿ ಗ್ರಾಮೀಣ ಘಟದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ,)

ಕಳೆದ ನಾಲ್ಕು ಅವಧಿಗಳಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಚಂಡ ಗೆಲವು ಸಾಧಿಸಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸರೇಶ ಅಂಗಡಿ ಅವರ ನಿಧನ ರಾಜ್ಯ ಬಿಜೆಪಿಗೆ ತುಂಬಲಾರದ ಹಾನಿ ತಂದಿತ್ತು. ಇನ್ನೊಂದಡೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂದು ಚಿಂತೆಗಳು ಪಕ್ಷದ ವರಿಷ್ಠರನ್ನು ಕಾಡುತ್ತಿತ್ತು. ಅಲ್ಲದೆ, ಬೆಳಗಾವಿ ಜಿಲ್ಲೆಯ ಬಿಜೆಪಿ ಶಆಸಕರು, ಸಚಿವರು ಹಾಗೂ ಮಾಜಿ ಶಾಸಕರು ತಮ್ಮದೆಯಾದ ಲೆಕ್ಕಾಚಾರದಲ್ಲಿ ತೊಡಗಿಕೊಂಡಿದ್ದರು. ಇದಕ್ಕೆ ಕಾರಣ ನಾಲ್ಕು ಅವಧಿಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಬಾರದೆಂದು ಸುಮಾರು ೭೦ಕ್ಕೂ ಅಧಿಕ ಆಂಕಾoಕ್ಷಿಗಳು ಬಿಜೆಪಿಯಲ್ಲಿ ಹುಟ್ಟಿಕೊಂಡಿದ್ದರು.
ಇದಕ್ಕೆ ಕೊನೆ ಹಾಡಿರುವ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಕೇಂದ್ರ ಗೃಹ ಸಚಿವ ಅಮಿತ ಶಾ ಬೆಳಗಾವಿಗೆ ಆಗಮಿಸುವ ಮುನ್ನವೆ ಬಿಜೆಪಿಯ ಈ ಐವರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಐವರ ಪೈಕಿ ಒಬ್ಬರಿಗೆ ಬಿಜೆಪಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ಪಕ್ಕಾ ಎಂದು ಬಿಜೆಪಿಯ ನಂಬಲು ಅರ್ಹ ಮೂಲಗಳು ತಿಳಿಸಿವೆ.

loading...