ಭೂಸ್ವಾಧಿನ ಕಾಯ್ದೆ ವಿರೋಧಿಸಿ ರೈತರಿಂದ ಮನವಿ

0
7

ಭೂಸ್ವಾಧಿನ ಕಾಯ್ದೆ ವಿರೋಧಿಸಿ ರೈತರಿಂದ ಮನವಿ
ರಾಮದುರ್ಗಃ ರೈತರ ವಿವಿಧ ಬೇಡಿಕೆ ಹಾಗೂ ಸರ್ಕಾರ ಭೂ ಸ್ವಾಧೀನ ಕಾಯ್ದೆ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಟಕದಿಂದ ತಾಲೂಕಿನ ಚಂದರಗಿಯಲ್ಲಿ ಬಾಗಲಕೋಟ-ಬೆಳಗಾವಿ ರಾಜ್ಯ ರಸ್ತೆ ತಡೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸುಮಾರು ೩ ಗಂಟೆಗಳ ಕಾಲ ರಸ್ತೆ ತಡೆಸಿದ ರೈತರು, ಸರಕಾರದ ವಿರುದ್ದ ದಿಕ್ಕಾರ ಕೂಗಿದರು. ಭೂ ಸ್ವಾಧಿನ ಕಾಯ್ದೆ ರೈತರಿಗೆ ಮರಣ ಶಾಸನವಾಗಿದ್ದು, ಆದ್ದರಿಂದ ರೈತರ ಒಪ್ಪಿಗೆ ಇಲ್ಲದೇ ಯಾವುದೇ ಕಾರಣಕ್ಕೂ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳಬಾರದು. ಹಳೆಯ ಭೂ ಸ್ವಾಧೀನ ಕಾಯ್ದೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಕಳಸಾ-ಬಂಡೂರಿ ಮಹಾದಾಯಿ ಯೋಜನೆಯನ್ನು ಅತೀ ಶೀಘ್ರದಲ್ಲಿ ಜಾರಿ, ವೀರಭದ್ರೆÃಶ್ವರ ಏತ ನೀರಾವರಿ ಯೋಜನೆಯಿಂದ ಭೂಮಿಗೆ ನೀರು ಹರಿಸುವಿಕೆಯನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಬೇಕು ಮತ್ತು ಕೆರೆಗಳನ್ನು ತುಂಬಿಸಬೇಕು.
ಸತ್ತಿಗೇರಿ ಮತ್ತು ಸಾಲಾಪೂರ ಬಸವೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಅತೀ ಶೀಘ್ರದಲ್ಲಿ ಪ್ರಾರಂಭಿಸಬೇಕು. ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಜನ-ಜಾನುವಾರುಗಳಿಗೆ ಸರಿಯಾದ ರೀತಿಯಲ್ಲಿ ನೀರು, ಮೇವಿನ ವ್ಯವಸ್ಥೆ ಮಾಡಬೇಕು. ರೈತರು ತುಂಬಿದ ಫಸಲ್ ಭೀಮಾ ಯೋಜನೆಯ ಹಣವನ್ನು ಉಳಿದ ರೈತರ ಖಾತೆಗೆ ಜಮೆ ಮಾಡಬೇಕು. ತಾಲೂಕಿನ ರೈತರಿಗೆ ಅತೀ ಶೀಘ್ರದಲ್ಲಿ ಬೆಳೆ ಪರಿಹಾರ ಹಣವನ್ನು ತತಕ್ಷಣ ರೈತರ ಖಾತೆಗೆ ಜಮೆ ಮಾಡಬೇಕು.
ಬರಗಾಲಕ್ಕೆ ತತ್ತರಿಸಿ ರೈತರು ಗುಳೆ ಹೋಗುವದನ್ನು ತಪ್ಪಿಸಿ ರೈತರಿಗೆ ಉದ್ಯೊÃಗ ಕಲ್ಪಿಸಬೇಕು ರೈತರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಹೋದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮನವಿ ಸಂದರ್ಭದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ, ತಾಲೂಕಾಧ್ಯಕ್ಷ ಜಗದೀಶ ದೇವರಡ್ಡಿ, ಸಂಚಾಲಕ ಯಲ್ಲಪ್ಪ ದೊಡಮನಿ, ಹಸಿರು ಸೇನೆ ಅಧ್ಯಕ್ಷ ಶಿವಾನಂದ ದೊಡವಾಡ, ರೈತ ಮುಖಂಡರಾದ ಸಂಗಯ್ಯ ಹಿರೇಮಠ, ರಾಜು ಅಣ್ಣಿಗೇರಿ, ಅಪ್ಪಣ್ಣ ಗುದಗಿ, ಪತ್ರೆಪ್ಪ ಕೊಪ್ಪದ, ಮಾಡುತಿ ಕರಶೆಟ್ಟಿ, ದ್ಯಾಮಣ್ಣ ಪೊತ್ತೆನವರ, ಭರಮಪ್ಪ ಜೋಗಿ, ಸುರೇಶ ಗುಂಜೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
೦೭

loading...