ಮಂಗಲ ಅಂಗಡಿ ಪರ ಪ್ರಚಾರ ನಡೆಸಿದ ಬುಡಾ ಅಧ್ಯಕ್ಷ ಘೂಳಪ್ಪ, ಟೋಪಣ್ಣವರ

0
43

 

ಬೆಳಗಾವಿ

ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರಿಗೆ ಮತ ನೀಡುವ ಮೂಲಕ ಸಿಎಂ ಹಾಗೂ ಪ್ರಧಾನಿ‌ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ‌ ಹೇಳಿದರು.

ಬುಧವಾರ ನಗರದ ಕರ್ನಾಟಕ ಹೌಸಿಂಗ್ ಬೋಡ್೯ ನಲ್ಲಿ ಪ್ರಚಾರದ ವೇಳೆ ಮಾತನಾಡಿದರು‌. ಕಳೆದ 20 ವರ್ಷಗಳಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸುರೇಶ ಅಂಗಡಿ ಅವರು ನಾಲ್ಕನೇ ಬಾರಿ ಕೇಂದ್ರದ ರಾಜ್ಯ ರೈಲ್ವೆ ಖಾತೆ ಸಚಿವರಾಗಿ ಒಂದೂವರೆ ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದರು. ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅವರ ಧರ್ಮಪತ್ನಿ ಮಂಗಲ ಅಂಗಡಿ ಅವರು ಸ್ಫರ್ಧಿಸಿದ್ದಾರೆ. ಅವರನ್ನು ಆಯ್ಕೆ ಮಾಡುವ ಮೂಲಕ ಮತ್ತಷ್ಟು ಅಭಿವೃದ್ಧಿಗೆ ಸಹಕರಿಸಬೇಕೆಂದರು.

ಬಿಜೆಪಿ ಮುಖಂಡ ರಾಜಕುಮಾರ ಟೋಪಣ್ಣವರ ಮಾತನಾಡಿ, ಕೇಂದ್ರ ಸಚಿವರಾಗಿ ಕೇವಲ ಒಂದೂವರೆ ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿರುವ ಸುರೇಶ ಅಂಗಡಿ ಅವರು, ಬೆಳಗಾವಿ, ಕಿತ್ತೂರು ಮಾರ್ಗವಾಗಿ ಧಾರವಾಡದ ರೈಲು ಯೋಜನೆಗೆ ಹಸಿರು ನಿಶಾನೆ ತೊರಿಸಿದ್ದಾರೆ. ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಉಪಚುನಾವಣೆ ಎದುರಾಗಿದ್ದು ಅವರ ಪತ್ನಿ ಮಂಗಲ ಅಂಗಡಿ ಅವರಿಗೆ ಬಹುಮತದ ಮೂಲಕ ಆರಿಸಿತರುವ ಸಂಕಲ್ಪ ಪ್ರತಿಯೊಬ್ಬರೂ ಮಾಡಬೇಂದರು.

loading...