ಮಲೇರಿಯಾ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೊಡಿಸಿ : ಶಿವಾನಂದ ಪೂಜಾರ

0
24

ಕನ್ನಡಮ್ಮ ಸುದ್ದಿ-ಕೊಪ್ಪಳ :
ಸಾರ್ವಜನಿಕರು ಸಹಕರಿಸಿದರೆ ಮಲೇರಿಯಾ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೊಡಿಸಿ ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ ಪೂಜಾರ ಹೇಳಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಇರಕಲ್ಲಗಡ ಹಾಗೂ ಸರ್ಕಾರಿ ಪ್ರೌಢ ಶಾಲೆ ಲೇಬಗೇರಿ ಇವರ ಸಂಯುಕ್ತ ಸಹಯೋಗದಲ್ಲಿ ಆಯೋಜಿಸಲಾದ ‘’ಮಲೇರಿಯಾ ವಿರೋದಿ ಮಾಸಾಚರಣೆ’’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅವರು ಮಾತನಾಡಿದರು.

ಸಾರ್ವಜನಿಕರು ಸಹಕರಿಸಿ ಮಲೇರಿಯಾ ಮುಕ್ತ ಸಮಾಜ ನಿರ್ಮಾಣ ಮಾಡಲು ಕೈಜೋಡಿಸುವಂತೆ ವಿವಿಧ ಇಲಾಖೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸುವಂತೆ ಮನವಿ ಮಾಡಿದರು. ಹಾಗೂ ಮಳೆಗಾಲದಲ್ಲಿ ಅಲ್ಲಲ್ಲಿ ನಿಂತ ಕಲುಷಿತ ನೀರು ಕುಡಿಯುವುದರಿಂದ ವಾಂತಿ ಬೇಧಿಯಾಗುವ ಸಾಧ್ಯತೆ ಇರುವುದರಿಂದ ಆದಷ್ಟು ಶುದ್ದವಾದ ನೀರು ಸೇವಿಸುವಂತೆ ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ ಪೂಜಾರ ಹೇಳಿದರು.

ಕಾರ್ಯಕ್ರಮದಲ್ಲಿ ಕಿರಿಯ ಆಶಾ ಸಹಾಯಕಿ ಸರೋಜಿನಿ , ಲೇಬಗೇರಿ ಸರಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಗುರುಗಳಾದ ಬಸವರಾಜ, ಸಹ ಶಿಕ್ಷಕ ಈರಣ್ಣ ಕುಂಬಾರ, ರವಿ ಕುಮಾರ ರವರು ಉಪಸ್ಥಿತರಿದ್ದರು.

loading...