ಮಹಾರಾಷ್ಟçದಿಂದ ಬರುವವರಿಗೆ ಆರ್‌ಟಿಪಿಸಿಆರ್ ಕಡ್ಡಾಯ: ಡಿಸಿ ಹಿರೇಮಠ

0
9

ಬೆಳಗಾವಿ

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಗಡಿಭಾಗದಲ್ಲಿ ಕಟ್ಟೇಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್ ಟಿಪಿಸಿ ಆರ್ 72 ಗಂಟೆಯ ವರದಿ ಪ್ರಯಾಣ ಮಾಡುವ ಎಲ್ಲರಿಗೂ ಕಡ್ಡಾಯವಾಗಿದೆ. ಇದು ಸರಕಾರದ ಕಟ್ಟು ನಿಟ್ಟಿನ ಸೂಚನೆಯಾಗಿದೆ. ಮಹಾರಾಷ್ಟ್ರ , ಬೆಳಗಾವಿ ಗಡಿಭಾಗದಲ್ಲಿ ಚಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿ ತಪಾಸಣೆ ನಡೆಸಲಾಗುತ್ತಿದೆ ಎಂದರು.
ಉತ್ತರ ಕರ್ನಾಟಕದ ಹೆಮ್ಮೆಯ ಪ್ರಸಿದ್ದ ದೇವಸ್ಥಾನ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ ಅದನ್ಜು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಅಲ್ಲದೆ ಚಿಂಚಲಿಯ ಮಾಯಕ್ಕ ದೇವಸ್ಥಾನವನ್ನು ಬಂದ್ ಮಾಡಲಾಗಿದೆ ಎಂದು ಹೇಳಿದರು.
ಕೇರಳದಿಂದ ಬಂದ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ವಸತಿ ನಿಯಯದಲ್ಲಿ ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡರೆ ಆ ಪ್ರದೇಶವನ್ನು ಕಂಟೋನ್ಮೆAಟ್ ಝೋನ್ ಎಂದು ಗುರುತಿಸಿ ಸೂಕ್ತ ಬಂದೋಬಸ್ತ ಮಾಡಲಾಗುವುದು ಎಂದರು.
ಶನಿವಾರ ರಾತ್ರಿಯಿಂದಲೇ ಕುಗನೋಳಿಯಲ್ಲಿ ಚಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಭಾನುವಾರದಿಂದ ಆರ್ ಟಿಪಿಸಿ ಆರ್ ತಪಾಸಣೆ ಕಡ್ಡಾಯವಾಗಿದೆ. ಗೂಡ್ಸ್ ವಾಹನಗಳನ್ನು ನಾವು ಏನು ಮಾಡಲು ಸಾಧ್ಯವಿಲ್ಲ. 3,800 ವಾಹನಗಳು ಸಂಚರಿಸಿವೆ. ಪ್ಯಾಸೆಂಜರ್ ವಾಹನಗಳನ್ನು ಮಾತ್ರ ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸಾರ್ವಜನಿಕರು ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಬಿಡಬಾರದು. ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದವರು ಬಿಮ್ಸ್ ಆಸ್ಪತ್ರೆಯಲ್ಲಿ ಆರ್ ಟಿಪಿಸಿ ಆರ್ ತಪಾಸಣೆ ಮಾಡಿಕೊಳ್ಳಬೇಕೆಂದು ಹೇಳಿದರು.

loading...