ಮುತಾಗಾದಲ್ಲಿ ವೈದ್ಯಗೆ ಕೊರೋನಾ ಸೋಂಕು..! 20 ಗರ್ಭಿಣಿಯರಿಗೆ ಆತಂಕ

0
588

ಬೆಳಗಾವಿ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಗವೈದ್ಯೆಗೆ ಕೊರೊನಾ ಸೋಂಕು ಎನ್ನುವ ಶಂಕೆಗೆ ಆರೋಗ್ಯಾಧಿಕಾರಿಗಳ ಎಡವಟ್ಟಿಗೆ 20ಕ್ಕೂ ಗರ್ಭಿಣಿಯರಿಗೆ ಸಂಕಷ್ಟ ಎದುರಾಗಿದೆ.

ಕೋವಿಡ್ ವಾರ್ಡ್‌ನಲ್ಲಿ ಕೆಲಸ ಮಾಡಿದ ವೈದ್ಯೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ‌ ನಿರ್ವಹಿಸುತ್ತಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಕೆಲಸ ಮಾಡುತ್ತಿದ್ದ ವೈದ್ಯೆಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.

ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ವೈದ್ಯ ದಿನಕ್ಕೆ ಸುಮಾರು 50 ರಿಂದ 60 ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ಸೋಮವಾರ ವಷ್ಟೆ 20ಕ್ಕೂ ಹೆಚ್ಚು ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಸಿದ್ದ ವೈದ್ಯೆಗೆ ಈಗ ಕೊರೋನಾ ಸೋಂಕಿನ ಭೀತಿ ಎದುರಾಗಿದೆ.
ಸದ್ಯ ಮುತಗಾ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‌ಡೌನ್ ಮಾಡಲು ಸಿದ್ದತೆ ನಡೆಸಿದ್ದಾರೆ. ಆರೋಗ್ಯಾಧಿಕಾರಿಗಳ ಯಡವಟ್ಟಿಗೆ 250ಕ್ಕೂ ಹೆಚ್ಚು ರೋಗಿಗಳಿಗೆ ಸಂಕಷ್ಟ ಅನುಭವುಸುವಂತಾಗಿರುವುದು ಮಾತ್ರ ಸತ್ಯ.

loading...