ಮೋದಿ ಇನ್ನೊಮ್ಮೆ ಅಧಿಕಾರಕ್ಕೆ‌ ಬರಬೇಕೆಂದು ಜನ ಬಯಸಿದ್ದಾರೆ : ಕಡಾಡಿ

0
13

ಬೆಳಗಾವಿ
ವೈರಿ ದೇಶ ಪಾಕಿಸ್ತಾನದ ಪ್ರಧಾನಿ‌ ಇಮ್ರಾನ್ ಖಾನ್ ಭಾರತದಲ್ಲಿ ಇನ್ನೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾದರೇ ಶಾಂತಿ ಮಾತುಕತೆಗೆ ಒಂದು ವೇದಿಕೆ ನಿರ್ಮಾಣವಾಗಲಿದೆ. ಆದ್ದರಿಂದ ಮೋದಿ‌ ಮತ್ತೊಮ್ಮೆ ಭಾರತದಲ್ಲಿ ಅಧಿಕಾರಕ್ಕೆ ಬರಬೇಕೆಂದು ಬಯಸಿದ್ದಾರೆ ಎಂದು ಬಿಜೆಪಿ ಮುಖಂಡ ಈರಣ್ಣಾ ಕಡಾಡಿ ಹೇಳಿದರು.

ಶುಕ್ರವಾರ ಮೋದಿ ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಎಲ್ಇಡಿ ಸ್ಕ್ರೀನ್ ಮೂಲಕ ಮಾಹಿತಿ ನೀಡುವ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ‌ ಎಚ್.ಡಿ.ದೇವೇಗೌಡ ಅವರು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ದೇಶವನ್ನೆ ಬಿಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಅವರ ಪುತ್ರ,ಲೋಕೋಪಯೋಗಿ ಸಚಿವ ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿರುವುದು ಹಾಸ್ಯಾಸ್ಪದ ಸಂಗತಿ ಎಂದರು.
ಏ.23 ರ ನಂತರ ದೇಶದ ಜನತೆ ಇನ್ನೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಿ ಜೆಡಿಎಸ್ ನ್ನು ತಿರಸ್ಕಾರ ಮಾಡಿ ಕಸದ ತೊಟ್ಟಿಗೆ ಹಾಕಲಿದ್ದಾರೆ. ಆಗ ರೇವಣ್ಣನವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಹರಿಹಾಯ್ದರು.

72 ವರ್ಷದಲ್ಲಿ ಕಾಂಗ್ರೆಸ್ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸುವ ಮೂಲಕ ದೇಶದ ಜನರ ಮನ ಗೆದಿದ್ದಾರೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಇನ್ನೊಂದು ಬಾರಿ ಮೋದಿಯಂಥ ಗಟ್ಟಿನಾಯಕ ಪ್ರಧಾನಿಯಾಗಬೇಕೆಂದು ಬಯಸಿದ್ದಾರೆ ಎಂದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮಾಡಿದ ಸಾಧನೆಯ ಬಗ್ಗೆ ಎಲ್ಇಡಿ ಸ್ಕ್ರೀನ್ ಇರುವ ವಾಹನಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಂಚರಿಸಲಿವೆ. ದೇಶದ ಜನ ಇನ್ನೊಂದು ಬಾರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕೆಂದು ಬಯಸಿದ್ದಾರೆ. ಕೆಲ ವಿರೋಧಿಗಳು ಎಷ್ಟೇ ಷಡ್ಯಂತ್ರ ನಡೆಸಿದರೂ ನರೇಂದ್ರ ಮೋದಿ ಇನ್ನೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ‌ ಮುಖಂಡರಾದ ರಾಜು ಚಿಕ್ಕನಗೌಡರ, ವಿಜಯ ಗುಡದಾರಿ, ಈರಣ್ಣಾ ಅಂಗಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...