ಯತ್ನಾಳ ರಾಜೀನಾಮೆ ಕೊಟ್ಟು ಹೊರಗೆ ಮಾತನಾಡಲಿ: ಸಚಿವ ನಿರಾಣಿ ವಾಗ್ದಾಳಿ

0
71

 

ಬೆಳಗಾವಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ಪಕ್ಷದಲ್ಲಿದ್ದುಕೊಂಡು ಪಕ್ಷದ ವಿರೋಧ ಮಾಡುವುದಿದ್ದರೆ ರಾಜೀನಾಮೆ‌ ಕೊಟ್ಟು ಹೊರ ಹೋಗಲಿ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದರು.

ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ವಿನಾಕಾರಣ ಬಿಜೆಪಿ ಸರಕಾರದ ವಿರುದ್ದ ಮಾತನಾಡುವುದು‌ ಸರಿಯಲ್ಲ. ಕೇಂದ್ರ ನಾಯಕರು ಹಾಗೂ ಯಡಿಯೂರಪ್ಪ ನವರು ಫೋಟೋ‌ ಹಾಕಿಕೊಂಡು ಗೆಲುವು ಸಾಧಿಸಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ಸುಮ್ಮನೆ ಬಾಯಿ‌ ಮುಚ್ಚಿಕೊಂಡು ಇರಲಿ. ಇಲ್ಲದಿದ್ದರೇ ರಾಜೀನಾಮೆ ನೀಡಿ ಹೊರ ಹೋಗಲಿ ಎಂದು ಹರಿಹಾಯ್ದರು.

ಅತ್ಯಂತ ನಾಲಾಯಕ ರಾಜಕಾರಣಿ ಎಂದರೆ ಯತ್ನಾಳ. ಯಾರ ಎಂದು ಯಾರು ಕೈ ಕಟ್ಟಿಕೊಳ್ಳುತ್ತಾರೆ. ಮೂರು ವರ್ಷಗಳ ಕಾಲ ಜಗದೀಶ್ ಶೆಟ್ಟರ್ ಹಾಗೂ ಪ್ರಲ್ಹಾದ ಜೋಶಿ ವಿರುದ್ಧ ಮಾತನಾಡಿದರು ಈಗ ಸಿಎಂ ಹಾಗೂ ಅವರ ಪುತ್ರನ ಬಗ್ಗೆ ಮಾತ ಮಾಡುತ್ತಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರು ನಾಲ್ಕು ಬಾರಿ ಸಂಸದರಾಗಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ನಾಲ್ಕನೇ ಬಾರಿಗೆ ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವರಾದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.

ಬೆಳಗಾವಿ,‌ಕಿತ್ತೂರು ಮಾರ್ಗವಾಗಿ ಧಾರವಾಡ ರೈಲ್ವೆ ಯೋಜನೆಗೆ ಅನುದಾನ ಬಿಡುಗಡೆ ಮಾಡಿಸಿದ್ದರು. ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅವರ ಧರ್ಮ ಪತ್ನಿ ಮಂಗಲಾ ಅಂಗಡಿ ಅವರು ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಐದು ಲಕ್ಷಗಳ ಮತಗಳ ಅಂತರದಲ್ಲಿ ಗೆಲುವು ಸಾಧಿಸುವಂತೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಆಹಾರ ಮತ್ತು ನಾಗರಿಕ‌ ಸಚಿವ ಉಮೇಶ ಕತ್ತಿ, ಶಾಸಕ ಅನಿಲ್ ಬೆನಕೆ, ಮಹೇಶ ತೆಂಗಿನಕಾಯಿ ಬಿಜೆಪಿ ಮುಖಂಡರಾದ ಎಂ.ಬಿ.ಜೀರಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...