ಯಾವುದೇ ಕ್ಷಣದಲ್ಲಿ ಮೈತ್ರಿ ಸರ್ಕಾರ ಪತನ : ಶೆಟ್ಟರ್

0
8

ಹುಬ್ಬಳ್ಳಿ,:- ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಮೈತ್ರಿ ಸರ್ಕಾರ ಯಾವುದೇ ಕ್ಷಣದಲ್ಲಿ ಪತನವಾಗಬಹುದು ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ನ, ಅತೃಪ್ತ ಶಾಸಕರು ಬಿಜೆಪಿ ಕಡೆ ಬರಲಿದ್ದಾರೆ. ಈಗಾಗಲೇ ಮಾಜಿ ಸಚಿವ, ಕಾಂಗ್ರೆಸ್ ನ ಬಂಡಾಯ ನಾಯಕ ರಮೇಶ್ ಜಾರಕಿಹೊಳಿ ಅತೃಪ್ತ ಶಾಸಕರನ್ನು ಬಿಜೆಪಿಗೆ ಕರೆ ತರುವ ಕೆಲಸ ಆರಂಭಿಸಿದ್ದಾರೆ.
ಬಿಜೆಪಿ ವಿಜಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ಬಿಜೆಪಿ ವರಿಷ್ಠ ನಾಯಕರಿಗೆ ವಿವರಿಸಲಿದ್ದು ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

loading...