ಯುಪಿಎಸ್ ಸಿ ಸಾಧಕರಿಗೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೋಳಿ ಅಭಿನಂದನೆ

0
50

ಯುಪಿಎಸ್ ಸಿ ಸಾಧಕರಿಗೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೋಳಿ ಅಭಿನಂದನೆ

ಕನ್ನಡಮ್ಮ ಸುದ್ದಿ-ಬೆಳಗಾವಿ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019 ನೇ ಸಾಲಿನ ಪ್ರತಿಷ್ಠಿತ ಯುಪಿಎಸ್ ಸಿ ಮುಖ್ಯ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಭಾನ್ವಿತ ನಾಲ್ಕು ಜನರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಯ ಅಥಣಿ ತಾಲ್ಲೂಕಿನ ಮೋಳೆ ಗ್ರಾಮದ ಜಗದೀಶ್ ಅಡಹಳ್ಳಿ 440ನೇ ಸ್ಥಾನ, ಹುಕ್ಕೇರಿ ತಾಲ್ಲೂಕಿನ ಯರನಾಳದ ಪ್ರಪುಲ್ ದೇಸಾಯಿ 532ನೇ ಸ್ಥಾನ, ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಗಜಾನನ ಬಾಲೆಯವರು 663ನೇ ರ್ಯಾಂಕ್, ಚಿಕ್ಕೋಡಿಯ ಪ್ರಿಯಾಂಕ ಕಾಂಬ್ಳೆ 670ನೇ ಸ್ಥಾನ ಪಡೆದಿದ್ದಾರೆ. ಇದು ಜಿಲ್ಲೆಯೇ ಹೆಮ್ಮೆ ಪಡುವಂತ ವಿಷಯವಾಗಿದೆ.

ನಾಲ್ಕು ಜನರ ಪ್ರತಿಭಾನಿತ್ವ ವಿದ್ಯಾರ್ಥಿಗಳ ಸಾಧನೆ ಇಂದಿನ ಯುವ ಪೀಳಿಗೆಗೆ ಆದರ್ಶಪ್ರಾಯರಾಗಲಿ. ಅವರು ಮುಂದಿನ ವೃತ್ತಿ ಜೀವನ ಸುಖವಾಗಿರಲಿ ಎಂದು ಪ್ರತಿಕಾ ಪ್ರಕಟಣೆಯ ಮೂಲಕ ಹರ್ಷ ವ್ಯಕ್ತ ಪಡಿಸಿದ್ದಾರೆ.

loading...