ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಿಎಂ ನಿತೀಶ್ ಗೈರು

0
7

ಪಾಟ್ನಾ:- ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಮತ್ತೊಮ್ಮೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ.
ಇಂದು ನಡೆದ ಐದನೇ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲ ಲಾಲ್ಜಿ ಟಂಡನ್, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ಬಿಜೆಪಿ ಶಾಸಕರು ಮತ್ತು ಎಂಎಲ್ ಸಿಗಳು ಮತ್ತು ಜೆಡಿಯು ಸಚಿವರು ಯೋಗ ಪ್ರದರ್ಶನದಲ್ಲಿ ಭಾಗಿಯದರೂ ಮುಖ್ಯಮಂತ್ರಿ ಮಾತ್ರ ಇತ್ತ ಕಡೆ ಸುಳಿಯಲಿಲ್ಲ.

ಈ ಸಂದರ್ಭದಲ್ಲಿ ಅವರ ಪಕ್ಷದ ಸಚಿವರು, ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಕಂಕರ್‌ಬಘಾದ ಪಾಟಲಿಪುತ್ರ ಕ್ರೀಡಾ ಸಮುಚ್ಚಯದಲ್ಲಿ ಪ್ರಧಾನ ಕಾರ್ಯಕ್ರಮ ಆಯೋಜಿಸಲಾಗಿತ್ತು
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಯೋಗವನ್ನು ಪ್ರದರ್ಶಿಸಿದರು.

ಜೆಡಿಯು ಬಿಜೆಪಿಯೊಂದಿಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲ ಸಲವಾಗಿದ್ದರೂ ಮುಖ್ಯಮಂತ್ರಿ ಮಾತ್ರ ಕಾರ್ಯಕ್ರಮಕ್ಕೆ ಬರದೇ ದೂರ ಉಳಿದು ಸುದ್ದಿ ಮಾಡಿದ್ದಾರೆ.

ಹಿಂದಿನ ಸಂದರ್ಭಗಳಲ್ಲಿ ನಿತೀಶ್ ಕುಮಾರ್ ಅವರು ನಿಯಮಿತವಾಗಿ ಯೋಗವನ್ನು ಅಭ್ಯಾಸ ಮಾಡುತ್ತಾ ಬಂದಿದ್ದರೂ ಅವರು ಅದನ್ನು ಸಾರ್ವಜನಿಕವಾಗಿ ತೋರಿಸಿಕೊಳ್ಳಲು ಇಷ್ಟಪಟ್ಟಿರಲಿಲ್ಲ. ಈಗಲೂ ಸಹ ಅವರು ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದೇ ದೂರವೇ ಉಳಿದಿದ್ದಾರೆ.

loading...