ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ

0
75

ಬೈಲಹೊಂಗಲ 31: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದನ್ನು ಖಂಡಿಸಿ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಬೃಹತ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಅವರ ಮೂಲಕ ಶಿಕ್ಷಣ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ವಿದ್ಯಾರ್ಥಿಗಳು, ಪಾಲಕರು ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರ್ಕಾರದ ಕಾರ್ಯ ವೈಖರಿಯನ್ನು ತೀವ್ರವಾಗಿ ಖಂಡಿಸಿದರು. ದ್ವಿತಿಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಎಲ್ಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದರೂ ಶಿಕ್ಷಣ ಇಲಾಖೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರಲ್ಲದೆ ಇಲಾಖೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆ ಕೂಡಲೆ ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಪಾಲಕರಾದ ಡಾ. ಮನೋಜ ಗಾಣೇಕರ, ಸದಾನಂದ ಸಂಪಗಾಂವ, ರಾಜಶೇಖರ ಮೆಟಗುಡ್ಡ, ಮಲ್ಲಿಕಾರ್ಜುನ ಬೋಡಕಿ, ಚನ್ನಪ್ಪ ಹರಕುಣಿ, ಎ.ಎಂ.ಹುಬ್ಬಳ್ಳಿ, ವಿ.ಜಿ.ಪಾಟೀಲ, ವಿದ್ಯಾರ್ಥಿಗಳಾದ ಶ್ರೇಯಸ್ಸ ಗಾಣೇಕರ, ಸಮಿವುಲ್ಲಾ ಹುಬ್ಬಳ್ಳಿ, ರೋಹಿತ ಘೋಡಕೆನ್ನವರ, ಪ್ರಫುಲ ಸಂಪಗಾಂವ, ನವೀದ ಮುಲ್ಲಾ ಮುಂತಾದವರು ಇದ್ದರು.

loading...

LEAVE A REPLY

Please enter your comment!
Please enter your name here