ರಾಗಾಗೆ ಸೋಲಿನ ಭಯ ಆರಂಭವಾದೆ: ಶೆಟ್ಟರ

0
8

ಬೆಳಗಾವಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸೋಲಿನ ಭಯ ಆರಂಭವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ಗುರುವಾರ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಮೇಥಿಯಲ್ಲಿ ಸೋಲಿನ ಭೀತಿ ಕಾಡುತ್ತಿರುವುದರಿಂದ ಕೇರಳದ ವಯನಾಡು ಕ್ಷೇತ್ರವನ್ನು ರಾಹುಲ್ ಗಾಂಧಿ ಆಯ್ಕೆ ಮಾಡಿಕೊಂಡಿದ್ದಾರೆ. ಶೇ.60 ಮತದಾರರು ಮುಸ್ಲಿಂ ಮತ್ತು ಕೈಸ್ತರು ಇದ್ದಾರೆ. ಆದ್ದರಿಂದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹಿಂದೂಗಳ ಮೇಲೆ ಕಾಂಗ್ರೆಸ್ ನಾಯಕರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.
ಬಿಜೆಪಿಗೆ ಉತ್ತರ ಪ್ರದೇಶ ಮಾತ್ರ ಪ್ರಬಲ ಸ್ಪರ್ಧೆ ಇದೆ. ಘಟಬಂಧನದಲ್ಲಿ ಕಾಂಗ್ರೆಸ್ ಪಕ್ಷವನ್ನು ಇತರೆ ಪಕ್ಷದವರು ಪರಿಗಣಿಸಿಲ್ಲ ಎಂದರು.
ಜೆಡಿಎಸ್ ಪಕ್ಷ ಮೊದಲು ಅಪ್ಪ ಮಕ್ಕಳ ಪಕ್ಷವಾಗಿತ್ತು. ಈಗ ಅಪ್ಪ , ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರ ಪಕ್ಷವಾಗಿದೆ. ಜೆಡಿಎಸ್ ಕಾರ್ಯಕರ್ತರಿಗೆ ಪಕ್ಷದ ಮೇಲೆ ನಂಬಿಕೆ ಇಲ್ಲ. ತುಮಕೂರು ಲೋಕಸಭಾ ಕ್ಣೇತ್ರದಿಂದ ಸ್ಪರ್ಧೆ ಮಾಡಿರುವುದರಿಂದ ದೇವೇಗೌಡರ ಮನೆಗೆ ಹೋಗುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಈಗಾಗಾಲೇ ಮೈತ್ರಿ ಸರಕಾರದಲ್ಲಿ ಗೊಂದಲ್ಲಿದೆ. ಇದರ ನಡುವೆಯೂ ದೋಸ್ತಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿರುವ ಕಾಂಗ್ರೆಸ್-ಜೆಡಿಎಸ್‍ಗೆ ಉತ್ತರ ಕರ್ನಾಟಕ ಭಾಗದಲ್ಲಿ ಯಾವುದೇ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಗೆಲುವುದು ಸಾಧ್ಯವಿಲ್ಲ.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಜವಾಬ್ದಾರಿ ನಾಯಕ. ಅವರು ಲೋಕಸಭಾ ಚುನಾವಣೆಯ ನಂತರ ಜೆಡಿಎಸ್ ನೆಗೆದು ಬಿಳುತ್ತದೆ ಎಂಬ ಹೇಳಿಕೆಯನ್ನು ವಿರೋಧ ಪಕ್ಷದವರು ತೀರುಚುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆಯಲ್ಲಿರುವ ದೋಸ್ತಿಗಳ ಸಿಎಂ ಕುಮಾರಸ್ವಾಮಿ ಅವರು ತಮ್ಮ ಪುತ್ರನನ್ನು ಗೆಲ್ಲಿಸಲು ಮಂಡ್ಯ ಕ್ಷೇತ್ರ ಬಿಟ್ಟು ಎಲ್ಲಿಯೂ ಪ್ರಚಾರಕ್ಕೆ ಬರುತ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಅಂಬರಿಷ್ ಗೆಲವು ಸುಲಭವಾಗುತ್ತದೆ. ಜೆಡಿಎಸ್ ಎಷ್ಟೆ ಪ್ರಯತ್ನಿದಿರೂ ಅಲ್ಲಿ ಗೆಲವು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

loading...