ವಿಚಾರಣಾಧೀನ ಕೈದಿ ಸಾವು

0
49

ಕನ್ನಡಮ್ಮ ಸುದ್ದಿ-ಬೆಳಗಾವಿ: ಅನಾರೋಗ್ಯದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊರ್ವ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ರಮೇಶ ಸುಭಾಷ ಪಾತನಿ (24) ಮೃತ ಖೈದಿ. ಪ್ರಕರಣದೊಂದಕ್ಕೆ ಸಂಬಂಧಿಸಿದಂತೆ ಫೆ.24 ರಂದು ನಗರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆರೋಪಿಗೆ ನಿಮೋಮಿನಾ ಕಾಯಿಲೆ ಇರುವುದರಿಂದ ಫೆ.27 ರಂದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫÀಲಿಸದೆ ಮೃತಪಟ್ಟಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

loading...