ವಿಜಾಪುರದಲ್ಲಿ 28 ರಂದು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ

0
23

ವಿಜಾಪುರ : ವಿಜಾಪುರ ತಾಲೂಕಿನ ಆಹೇರಿ ಗ್ರಾಮದ ಶ್ರೀ ಬಸವೇಶ್ವರ ಕರ್ಮವೀರ ಕಲಾ, ಸಾಹಿತ್ಯ, ಸಂಸ್ಕ್ಕತಿ ವೇದಿಕೆ ಹಾಗೂ ಶ್ರೀ ಮಲ್ಲಿಕಾರ್ಜುನ ಕಲಾ, ಸಾಹಿತ್ಯ ಸಂಸ್ಕ್ಕತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಕಳೆದ ಮಾರ್ಚ-ಎಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಶೇಕಡಾ 85ಅರ ಮೇಲ್ಪಟ್ಟು ಅಂಕ ಗಳಿಸಿದ ಜಿಲ್ಲೆಯ 60 ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ರವಿವಾರ ದಿನಾಂಕ  28-7-2013 ರಂದು ಬೆಳಿಗ್ಗೆ 10-00 ಗಂಟೆಗೆ  ಎರ್ಪಡಿಸಲಾಗಿದೆ.

ಈ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯವನ್ನು ವಿಜಾಪೂರ ಶಿವಬಸವ ಯೋಗಾಶ್ರಮದ ಪೂಜ್ಯ ಶ್ರೀ ಶಂಭುಲಿಂಗ ಮಹಾಸ್ವಾಮಿಗಳು ವಹಿಸುವರು. ಜಿಲ್ಲಾ ಎ.ಎಸ್.ಪಿ. ಆರ್. ಚೇತನ ಸಮಾರಂಭವನ್ನು ಉದ್ಘಾಟಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಲ್ಲಿಕಾರ್ಜುನ ಯಂಡಿಗೇರಿ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಂಕ್ರುಬಾಯಿ ಬ. ಚಲವಾದಿ, ವಿಜಾಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯದ ಶಿಕ್ಷಣಾಧಿಕಾರಿಗಳಾದ ಎಂ.ಬಿ. ಚಟ್ಟರಕಿ, ವಿಜಾಪುರ ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ವಾಯ್. ಕೊಣ್ಣೂರ, ವಿಜಾಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ವಾಯ್. ಹೊನ್ನಕಸ್ತೂರಿ, ಸಿಂದಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಎಂ. ದೇವರೆಡ್ಡಿ, ಕರ್ನಾಟಕ ರಾಜ್ಯ ವಕೀಲರ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಭೃಂಗಿಮಠ, ವಿಜಾಪುರ ಸಿಕ್ಯಾಬ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಪ್ರೊ. ಯು.ಎನ್. ಕುಂಟೋಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲೆಯ 5 ತಾಲೂಕಿನಿಂದ 60 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು

loading...

LEAVE A REPLY

Please enter your comment!
Please enter your name here