ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ

0
57

ಬೆಳಗಾವಿ 23: ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪುರುಷರ ವ್ಹಾಲಿಬಾಲ್ ತಂಡವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರು ಕಿತ್ತೂರಿನಲ್ಲಿ ಆಯೋಜಿಸಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ ಬೆಳಗಾವಿ ಜ್ಯೂನಲ್ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ವ್ಹಾಲಿಬಾಲ್ ತಂಡವು ತೃತೀಯ ಸ್ಥಾನ ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ. ವ್ಹಾಲಿಬಾಲ್ ತಂಡಕ್ಕೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್. ಓ. ಹಲಸಗಿಯವರು, ಜಗದೀಶ ಎಸ್. ಗಸ್ತಿ, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ, ಬೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

loading...

LEAVE A REPLY

Please enter your comment!
Please enter your name here