ಶಾಂತಿಯ ತವರೂರಲ್ಲಿ ದುಷ್ಕರ್ಮಿಗಳ ವಿರುದ್ದ ಸರಕಾರ ಕ್ರಮ ಕೈಗೊಳ್ಳುತ್ತದೆ: ಶಾಸಕ ಸೋಮಶೇಖರ ರೆಡ್ಡಿ ವಿಶ್ವಾಸ

0
24

ಬೆಳಗಾವಿ ಕರ್ನಾಟಕ ವಿಶ್ವದಲ್ಲಿ ಶಾಂತಿಗೆ ಹೆಸರಾದಂತ ರಾಜ್ಯ ಎಂದು ಪ್ರಸಿದ್ದಿ ಪಡೆದಿದೆ. ಆದರೆ ಕೆಲ ಕಿಡಿಗೇಡಿಗಳು ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆಸಿದ ಪ್ರಕರಣದಿಂದ ಮನಸ್ಸಿಗೆ ನೋವು ಉಂಟುಮಾಡಿದೆ. ತಪ್ಪಿಸ್ಥ ಆರೋಪಿಗಳ ವಿರುದ್ದ ಕಠಿಣ ಕ್ರಮವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಕ್ರಮ ಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಬಳ್ಳಾರಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಂತಿ ತವರೂರು ಕರ್ನಾಟಕ ಆದರೆ ಇಂಥ ಘಟನೆಗಳು ಮರುಕಳಿಸದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ನೋಡಿಕೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ. ಪೊಲೀಸ್ ಠಾಣೆಗೆ ಬೆಂಕಿ ಹೆಚ್ಚಿದ ಆರೋಪಿಗಳಿಗೆ ಎಷ್ಟೇ ಪ್ರಭಾವಿಗಳಿದ್ದರೂ ಅವರ ಮೇಲೆ ಕ್ರಮ ಜರುಗಿಸಬೇಕು. ಇದಕ್ಕೆ ರಾಜ್ಯ ಸರಕಾರ ಸೂಕ್ತ ಕ್ರಮ ಜರುಗಿಸುತ್ತದೆ ಎಂದು ವಿಶ್ವಾಸ ಇದೆ ಎಂದರು.

loading...