ಶೀಘ್ರದಲ್ಲೇ ಬೆಳಗಾವಿಗೆ ಆಗಮಿಸಿ ಸತೀಶ ಪರ ಪ್ರಚಾರ ನಡೆಸಲಿದ್ದಾರೆ ಡಿಕೆಶಿ

0
39

ಬೆಳಗಾವಿ
ಬೆಳಗಾವಿ ಲೋಕಸಭಾ ಉಪಚುನಾವಣೆ ದೇಶದಲ್ಲಿ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಪೈಕಿ ಕೆರಳದ ವಿಧಾನಸಭೆ ಚುನಾವಣೆಗೆ ರಾಷ್ಟಿçÃಯ ಕಾಂಗ್ರೆಸ್ ಸ್ಟಾರ್ ಪ್ರಚಾರಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೆರಳಕ್ಕೆ ತೆರಳಲಿದ್ದು, ಶೀಘ್ರದಲ್ಲಿಯೇ ಕೆಪಿಸಿಸಿ ಕಾರ್ಯಾಧ್ಯಕ್ಷ, ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಅವರ ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಹೌದು. ದೇಶದಲ್ಲಿ ಪಂಚ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕೆರಳದ ವಿಧಾನಸಭೆ ಚುನಾವಣೆಯ ರಾಷ್ಟಿçÃಯ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತೆರಳಲಿದ್ದಾರೆ. ಬೆಳಗಾವಿಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಲು ಶೀಘ್ರದಲ್ಲಿಯೇ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.


ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕಾರ್ ಮೇಲೆ ಚಪ್ಪಲಿ ಎಸೆದು ಗೋ ಬ್ಯಾಕ್ ಡಿ.ಕೆ. ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು.
ಅದಾದ ಬಳಿಕ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬೆಳಗಾವಿಗೆ ಬರುವುದು ಅನುಮಾನ ಎನ್ನಲಾಗುತ್ತಿತ್ತು. ಈಗ ಕೆರಳದ ಸ್ಟಾರ್ ಪ್ರಚಾರಕ್ಕ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿದ್ದು, ಕೆರಳದಲ್ಲಿ ಪ್ರಚಾರ ನಡೆಸಿ ಶೀಘ್ರದಲ್ಲಿ ಬೆಳಗಾವಿಗೆ ಡಿ.ಕೆ.ಶಿವಕುಮಾರ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ವಲಯದಿಂದ ತಿಳಿದು ಬಂದಿದೆ.

loading...