ಶ್ರೀರಾಮೇಶ್ವರ ಏತ ನೀರಾವರಿ ಯೋಜನೆ ಆರಂಭಿಸಲು ಆಗ್ರಹ

0
12

ಬೆಳಗಾವಿ: ನಮಗೆ ಟ್ಯಾಂಕರ್ ನೀರು ಬೇಡವೇ ಬೇಡ, ಸ್ಥಗಿತಗೊಳಿಸಿರುವ ಶ್ರೀ ರಾಮೇಶ್ವರ ಏತ ನೀರಾವರಿ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವಂತೆ ಆಗ್ರಹಿಸಿ ರಾಮದುರ್ಗ, ಗೋಕಾಕ, ಸವದತ್ತಿ ತಾಲೂಕಿನ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಮದುರ್ಗ, ಗೋಕಾಕ್, ಸವದತ್ತಿ ತಾಲೂಕುಗಳು ನೂರಾರು ರೈತರು ಪ್ರತಿಭಟನೆ ನಡೆಸಿ, ನೀರಿಗಾಗಿ ಹೋರಾಟ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.
ಸುಮಾರು ೨೦ ಹಳ್ಳಿಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗುತ್ತಿದೆ. ಪ್ರತಿ ಬಾರಿ ಘಟಪ್ರಭಾ ನದಿಗೆ ನೀರು ಹರಿಸುವ ವೇಳೆ ಶ್ರೀ ರಾಮೇಶ್ವರ ಏತ ನೀರಾವರಿ ಯೋಜನೆಯ ಅಚ್ಚು ಕಟ್ಟು ಪ್ರದೇಶದ ಕೆರೆಗಳನ್ನು ತುಂಬಿಸುವ ಪ್ರಸ್ತಾವನೆ ಇದೆ, ಆದರೆ ಈ ಬಾರಿ ಪ್ರಾದೇಶಿಕ ಆಯುಕ್ತರು ಈ ಪ್ರಸ್ತಾವನೆಯನ್ನು ಕೈ ಬಿಟ್ಟಿದ್ದಾರೆ. ಇದರಿಂದ ಜನರಿಗೆ ತೀವ್ರ ತೊಂದರೆಯಾಗುತ್ತಿದ್ದು ಕೂಡಲೇ ಶ್ರೀ ರಾಮೇಶ್ವರ ಏತ ನೀರಾವರಿ ಯೋಜನೆಯ ಅಚ್ಚು ಕಟ್ಟು ಪ್ರದೇಶದ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ರಮೇಶ ದೇಶಪಾಂಡೆ, ರಾಮಣ್ಣ ಮಾರಡ್ಡಿ, ದುಂಡಪ್ಪ ಕೊಳವಿ, ಬಸವರಾಜ ಪ್ರಭು ರಾಯರ, ಅಶೋಕ ಬಡಿಗೇರ, ಪ್ರಶಾಂತ ಗುಲಗಂಜಿಕೊಪ್ಪ, ಪ್ರವೀಣ ಮೇಳವಂಕಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

loading...